ಅಂಗವಿಕಲ ನೇಣಿಗೆ ಶರಣು

ಕೊರಟಗೆರೆ, ಜು. ೧೨- ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅಂಗವಿಕಲ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಚುಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನರಸಿಂಹಮೂರ್ತಿ(22) ಎಂಬುವವರೇ ನೇಣು ಹಾಕಿಕೊಂಡಿರುವ ದುರ್ದೈವಿ. ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪಿಎಸ್ಐ ಬಿ.ಸಿ. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment