ಅಂತರ ಕಾಯ್ದುಕೊಂಡು ಅಗತ್ಯ ವಸ್ತುಗಳನ್ನು ಖರೀದಿಸಿ

ಹನೂರು : ಮಾ.27- ಕೋರೊನಾ ವೈರಸ್ (ಕೋವಿಡ್-19) ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಲಾಕ್ ಡೌನ್ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನಲೆ ಸಾರ್ವಜನಿಕರು ಅಂತರವನ್ನು ಕಾಯ್ದುಕೊಂಡು ಅಗತ್ಯ ವಸ್ತುಗಳನ್ನು ಖರೀದಿಸಬೇಕು ಎಂದು ಪ.ಪಂ.ಮುಖ್ಯಾಧಿಕಾರಿ ಮೂರ್ತಿ ತಿಳಿಸಿದರು.
ಇಂದು ಬೆಳಿಗ್ಗೆ ಹನೂರು ಪಟ್ಟಣದ ಮುಖ್ಯ ರಸ್ತೆ, ಸರ್ಕಾರಿ ಬಸ್ ನಿಲ್ದಾಣ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿರುವ ಅಗತ್ಯ ಸೇವಾ ಅಂಗಡಿಗಳಲ್ಲಿ ಯಾರು ಸಹ ಗುಂಪು ಗುಂಪು ಸೇರದೆ ಸರ್ಕಾರ ಹಾಗೂ ಜಿಲ್ಲಾಡಳಿತ ಹೊರಡಿಸಿರುವ ಮುಂಜಾಗ್ರತಾ ಕ್ರಮವನ್ನು ಪಾಲಿಸಬೇಕು . ಅಲ್ಲದೆ ಸರ್ಕಾರ ಹಾಗೂ ಜಿಲ್ಲಾಡಳಿತ ಈಗಾಗಲೇ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಿಗ್ಗೆ 6 ರಿಂದ 10, ಸಂಜೆ 5 ರಿಂದ 7 ಗಂಟೆ ಸಮಯ ನಿಗದಿ ಮಾಡಿದೆ.ದೇಶದಲ್ಲಿ ಕೋರೊನಾ ವೈರಸ್ ಎಲ್ಲೆಡೆ ತಲ್ಲಣಗೊಳಿಸುತ್ತಿರುವ ಹಿನ್ನಲೆ ಅದನ್ನು ತಡೆಗಟ್ಟಲು ಸಾರ್ವಜನಿಕರಿಗೆ ಈಗಾಗಲೇ ಅರಿವನ್ನು ಮುಡಿಸಲಾಗಿದೆ ಅದರ ಜೊತೆಗೆ ಪಟ್ಟಣದಲ್ಲಿ ಅಗತ್ಯ ವಸ್ತುಗಳಾದ ಹಣ್ಣು, ತರಕಾರಿ, ಹಾಗೂ ಔಷಧಿಗಳನ್ನು ಖರೀದಿಸಲು ಬರುವ ಜನರು ಮೂರು ಅಡಿಗಿಂತ ದೂರ ನಿಂತು ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಬೇಕು ಎಂದು ಸೂಚನೆ ನೀಡಿ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು.
ಈ ಸಂದರ್ಭದಲ್ಲಿ ಹನೂರು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

Leave a Comment