ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಸಿರವಾರ.ಜ.21- 12ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಅಂಬಿಗರ ಚೌಡಯ್ಯರದ್ದಾಗಿತು ಎಂದು ಅಂಬಿಗರ ಚೌಡಯ್ಯ ಸಂಘದ ಅಧ್ಯಕ್ಷ ತಿಮ್ಮಣ ಕಟ್ಟಿಮನೆ ಹೇಳಿದರು.
ಪಟ್ಟಣ ಪಂಚಾಯ್ತಿಯಲ್ಲಿ ಇಂದು ಬೆಳಗ್ಗೆ ಅಂಬಿಗರ ಚೌಡಯ್ಯ ಜಯಂತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವರಾಗಿದ್ದಾರೆ.
ತನ್ನ ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಇವರ ವಚನಗಳ ಅಂಕಿತವಾಗಿದೆ.
ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟುಹಾಕುವ ಅಂಬಿಗ ಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳವ ಎಂದು ಹೇಳಿಕೊಳ್ಳುವುದರಲ್ಲಿ ತಮ್ಮ ಅನುಭಾವದೃಷ್ಟಿಯನ್ನು ಪ್ರಕಟಿಸಿದ್ದಾರೆ ಎಂದರು. ಪಂಚಾಯ್ತಿಯ ಸಮುದಾಯ ಸಂಘಟನಾಧಿಕಾರಿ ಹಂಪಯ್ಯ ಮಾತನಾಡಿ ಹಳೆಯ ಮತ್ತು ಹೊಸ ನಂಬಿಕೆಗಳ ಅವಸ್ಥಾಂತರದ ಅವ್ಯವಸ್ಥೆಯಲ್ಲಿದ್ದ ಅಂದಿನ ಸಮಾಜದಲ್ಲಿರುವ ಲೋಪದೋಷಗಳನ್ನು ನಿರ್ದಾಕ್ಷಿಣ್ಯವಾಗಿ ಎತ್ತಿ ತೋರಿಸುವ ಅಂಬಿಗರ ಚೌಡಯ್ಯನ ಈ ವಚನಗಳು ಬಹುಶಃ ಅಂದಿನ ಸಾಮಾಜಿಕ ಆವಶ್ಯಕತೆಯ ಪರಿಣಾಮಗಳೆಂದು ನಾವು ಭಾವಿಸಬಹುದು. ಅಂಬಿಗರ ಚೌಡಯ್ಯನ ವಚನಗಳಿಂದ ನಮಗೆ ಕಂಡುಬರುವ ಸಮಾಜದ ಅವ್ಯವಸ್ಥೆಯ ಚಿತ್ರಣವಾಗಿದೆ. ಅವರ ವಚನಗಳಲ್ಲಿ ನಿಜಶರಣನ ಮೊರೆತದ ಜೊತೆಗೆ ಸುಧಾರಕನ ಕಟುಟೀಕೆಯೂ ಕೇಳಿಬರುತ್ತದೆ.
ಕನ್ನಡ ಸಾಹಿತ್ಯದಲ್ಲಿ ಈ ಬಗೆಯ ದಿಟ್ಟತನ, ವ್ಯಗ್ರತೆ ಕಂಡುಬರುವುದು ಬಹುಶಃ ಇಬ್ಬರಲ್ಲೇ ಎಂದು ತೋರುತ್ತದೆ. ಒಬ್ಬರು ಸಿಡಿಲು ನುಡಿಯ ಸರ್ವಜ್ಞ; ಇನ್ನೊಬ್ಬ ಕೆಚ್ಚೆದೆಯ ವಚನಕಾರ ಅಂಬಿಗರ ಚೌಡಯ್ಯ ಎಂದರು. ಸದಸ್ಯರಾದ ಕೃಷ್ಣನಾಯಕ, ಸಂದೀಪ ಪಾಟೀಲ್, ಚನ್ನಬಸವಗಡ್ಲ, ಇರ್ಫಾನ್ ಬಢಘರ್, ಎಪಿಎಂಸಿ ನಿರ್ದೇಶಕ ಹೆಚ್.ಕೆ. ಅಮರೇಶ, ಕರವೇಯ ಡಿ.ಯಮನೂರು, ಕೆ.ರಾಘವೇಂದ್ರ ಮಾತನಾಡಿದರು. ಸದಸ್ಯರಾದ ಇಮಾಮ್, ಮುಖಂಡರಾದ ನಾಗರಾಜಗೌಡ, ಮಲ್ಲಪ್ಪ ಖಜ್ಜಿ, ಮಲ್ಲಪ್ಪ ಎನ್, ರಾಜೇಶ, ನಾಗರಾಜ ಕೆ, ನಾಗೇಶ ಮಿಲ್ಟ್ರಿ, ಅರಳಪ್ಪ, ಯಲ್ಲಪ್ಪ ಮಡ್ಡಿ, ಬಸವರಾಜ ಜಾಡಲದಿನ್ನಿ, ಅಮರನಾಥ, ಕರಿಯಪ್ಪ ಕೆ, ಸಿಬ್ಬಂದಿಗಳಾದ ಪದ್ಮ, ಲಕ್ಷ್ಮಿ, ಸುನಿತ, ಶರಣಬಸವ, ವಿರೇಶ ನೆಕಾರ್, ಸನಾ, ಚಾಂದಸಾಬ್, ನಾಗರಾಜ ಸೇರಿದಂತೆ ಇನ್ನಿತರರು ಇದ್ದರು.

Leave a Comment