ಅಂಬೇಡ್ಕರ್ ಭವನಕ್ಕೆ ನಿವೇಶನ ನೀಡಲು ಒತ್ತಾಯ

ದಾವಣಗೆರೆ, ಡಿ. 6 – ಅಂಬೇಡ್ಕರ್ ಭವನ ನಿರ್ಮಾಣಕ್ಕೆ 3 ಕೋಟಿ ರೂ. ಮಂಜೂರಾಗಿ 6 ವರ್ಷ ಕಳೆದರು ನಿವೇಶನ ನೀಡಲು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ದೊರಕಿಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರು ಕೂಡ ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಆದ್ದರಿಂದ ಜಿಲ್ಲಾಡಳಿತಕ್ಕೆ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ ಮಾಡುವ ನೈತಿಕ ಹಕ್ಕು ಇಲ್ಲ ಎಂದು ದೂರಿದರು.
ಈ ಕೂಡಲೇ ದಲಿತ ಮುಖಂಡರ ಸಭೆ ನಡೆಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಆಲೂರು ನಿಂಗರಾಜ್, ಜಿಲ್ಲಾ ಸಂಚಾಲಕ ಹೆಗ್ಗೆರೆ ರಂಗಪ್ಪ, ಪುಣಭಘಟ್ಟ ನಿಂಗಪ್ಪ, ಪರಶುರಾಮ್, ಪರಸಪ್ಪ, ಸುರೇಶ್, ಲಕ್ಷ್ಮಣ್, ಹನುಮಂತಪ್ಪ, ಅಂಜಿನಪ್ಪ ಸೇರಿದಂತೆ ಅನೇಕರು ಪ್ರತಿಭಟನೆ ಇದ್ದರು.

Leave a Comment