ಅಕ್ರಮ ಮರಳು : ಟ್ರ್ಯಾಕ್ಟರ್ ಪಲ್ಟಿ

ರಾಯಚೂರು.ನ.08- ಲಿಂಗಸೂಗೂರು ತಾಲೂಕಿನ ಅಕ್ರಮ ಮರಳು ದಂಧೆ ವ್ಯಾಪಕವಾಗಿ ನಡೆದಿದೆ ಎನ್ನುವುದಕ್ಕೆ ಟ್ರ್ಯಾಕ್ಟರ್ ಪಲ್ಟಿ ಪ್ರಕರಣ ಖಚಿತ ಪಡಿಸಿದೆ.
ತಾಲೂಕಿನ ವ್ಯಾಕರನಾಳ ಬಳಿ ಈ ಘಟನೆ ಸಂಭವಿಸಿದೆ. ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವೇಗ ಮತ್ತು ನಿರ್ಲಕ್ಷ್ಯೆ ಹಿನ್ನೆಲೆಯಲ್ಲಿ ರಸ್ತೆ ಪಕ್ಕದಲ್ಲಿರುವ 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ಮುದುಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಲಿಂಗಸೂಗೂರು ತಾಲೂಕಿನ ಅಕ್ರಮ ಮರಳು ದಂಧೆ ವ್ಯಾಪಕವಾಗಿ ನಡೆಯುತ್ತಿದೆ ಎನ್ನುವುದಕ್ಕೆ ಈ ಘಟನೆ ನಿದರ್ಶನವಾಗಿದೆ.
ಅಕ್ರಮ ಮರಳು ದಂಧೆ ನಿಯಂತ್ರಣಕ್ಕೆ ಏನೆಲ್ಲಾ ಪ್ರಯತ್ನ ನಡೆದರೂ, ಮತ್ತೊಂದು ಕಡೆ ಅಕ್ರಮ ಮರಳು ದಂಧೆ ನಿರಂತರವಾಗಿ ನಡೆಯುತ್ತಿದೆ. ಲಿಂಗಸೂಗೂರು, ದೇವದುರ್ಗ ಮತ್ತು ರಾಯಚೂರು ಭಾಗಗಳಲ್ಲಿ ಕೃಷ್ಣಾ ನದಿಯಿಂದ ಭಾರೀ ಪ್ರಮಾಣದ ಮರಳು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಈ ಅಕ್ರಮ ಮರಳು ದಂಧೆಯಲ್ಲಿ ಪ್ರಭಾವಿ ರಾಜಕಾರಣಿಗಳ ಹಸ್ತಕ್ಷೇಪವಿರುವುದು ಕಾನೂನು ಕ್ರಮಕ್ಕೆ ಬಹುದೊಡ್ಡ ಅಡ್ಡಿಯಾಗಿದೆ.

Leave a Comment