ಅಕ್ರಮ ಮರಳು ಸಾಗಣೆ: 4 ಟ್ರ್ಯಾಕ್ಟರ್ ವಶ

ತುಮಕೂರು, ಮೇ ೧೪- ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿರುವವರ ವಿರುದ್ಧ 4 ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಳು ತುಂಬಿದ್ದ 4 ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಂಡಿರುವ ಘಟನೆ ಸಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಿಲ್ಲಾ ಪೊಲೀಸ್ ಕಛೇರಿಯ ವಿಶೇಷ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಅಕ್ರಮ ಕಾನೂನು ಬಾಹಿರ ಚಟುವಟಿಕೆ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment