ಅಕ್ರಮ ಸಾಗಾಟ: ೧೮ ಲ.ರೂ. ಮೌಲ್ಯದ ಚಿನ್ನ ವಶ

ಮಂಗಳೂರು, ನ.೨೦- ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಮಂಗಳೂರು ನಗರಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ೪೮೩.೫೭ ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸ್ವಾಧೀನಪಡಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ಏರ್‌ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಾಗ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ೨೪ ಕ್ಯಾರೆಟ್ ಶುದ್ಧತೆಯ ೧೮.೪೭ಲಕ್ಷ ರೂ. ಮೌಲ್ಯದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಪ್ಯಾಕೆಟ್‌ಗಳಲ್ಲಿ ಪ್ರಯಾಣಿಕನೊಬ್ಬ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿದ್ದ ಎನ್ನಲಾಗಿದ್ದು ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಚಿನ್ನ ಅಕ್ರಮ ಸಾಗಾಟ ಕೃತ್ಯ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment