ಅಖಾಡದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿಗಳು

ಬೆಳಗಾವಿ, ಹಾವೇರಿ : ಅಥಣಿ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿರುವ ಬೆನ್ನಲ್ಲೇ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮನವೊಲಿಕೆ ತಂತ್ರ ಫಲಿಸಿದೆ. ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿದಿದ್ದ ಅಭ್ಯರ್ಥಿಗಳು ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಹಿರೇಕೆರೂರು ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಶಿವಾಚಾರ್ಯ ಸ್ವಾಮೀಜಿ ಮತ್ತು ಅಥಣಿಯಲ್ಲಿ ಗುರು ದಾಶ್ಯಾಳ್ ನಾಮಪತ್ರ ಹಿಂಪಡೆದು ಅಖಾಡದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಈ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಇನ್ನು ಹೊಸಕೋಟೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಶರತ್ ಬಚ್ಚೇಗೌಡರಿಗೆ ಬೆಂಬಲ ಸೂಚಿಸಿದೆ.ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗಳು ಚುನವಣಾ ಕಣದಲ್ಲಿದ್ದಾರೆ.

ಇನ್ನು ಹಿರೇಕೆರೂರಿನಲ್ಲಿ ಅಖಾಡಕ್ಕಿಳಿದಿದ್ದ ಶಿವಾಚಾರ್ಯ ಸ್ವಾಮೀಜಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರೆ, ಅತ್ತ ಅಥಣಿಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸಾರಿ ಜೆಡಿಎಸ್ ಸೇರ್ಪಡೆಗೊಂಡು ಅಖಾಡಕ್ಕಿಳಿದಿದ್ದ ಗುರು ದಾಶ್ಯಾಳ ರನ್ನು ಲಕ್ಷ್ಮಣ್ ಸವದಿ ಮನವೊಲಿಸಿದ್ದಾರೆಂದು ಹೇಳಲಾಗಿದೆ…

Leave a Comment