ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಪ್ರತಿಭಟನೆ

ಹರಪನಹಳ್ಳಿ.ಜೂ.29; ಪಟ್ಟಣದ ಹರಿಹರ ರಸ್ತೆಯಲ್ಲಿರುವ ಅಂಬ್ಲಿ ದೊಡ್ಡ ಭರಮಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಂದ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ತಾಲೂಕು ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ಸಂಘಟನೆಯ ಸರ್ವ ಸದಸ್ಯರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಹಾಗೂ ಪ್ರಾಚಾರ್ಯರ ವಿರುದ್ಧ ಪ್ರತಿಭಟಿಸಿದರು. ಪಟ್ಟಣದ ಮಿನಿ ವಿಧಾನಸೌಧಕ್ಕೆ ತೆರಳಿದ ಪ್ರತಿಭಟನಾಕಾರರು ಪಟ್ಟಣದಲ್ಲಿರುವ ಅಂಬ್ಲಿ ದೊಡ್ಡ ಭರಮಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಹಗಲು ದರೋಡೆ ನಡೆಸುತ್ತಿದ್ದಾರೆ ಹಗಲು ದರೋಡೆ ಮಾಡುತ್ತಿರುವುದು ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ಕಾರರು ತಾಲೂಕು ತಾಹಸಿಲ್ದಾರ್ ಅವರ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯ ಸಂಚಾಲಕ ಹೆಚ್.ಎಂ.ಸಂತೋಷ್ ಮಾತನಾಡಿ, ಹರಪನಹಳ್ಳಿ ತಾಲೂಕು ಅತ್ಯಂತ ಹಿಂದುಳಿದ ತಾಲ್ಲೂಕು ಈ ಬಡ ತಾಲೂಕಿನಲ್ಲಿ ಬಡತನ ರೇಖೆಗಿಂತ ಹೆಚ್ಚಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದಾರೆ ಇಂತಹ ಸಂಕಷ್ಟದಲ್ಲಿರುವ ಬಡ ವಿದ್ಯಾರ್ಥಿಗಳ ಹತ್ತಿರ ಕಾಲೇಜು ಆಡಳಿತ ಮಂಡಳಿಗಳು ಹಗಲು ದರೋಡೆ ಮಾಡುತ್ತಿರುವುದು ಬಹಾಳ ವಿಪರ್ಯಾಸ ಎಂದು ವಿಷಾದಿಸಿದರು.ಈ ಸಂದರ್ಭದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯ ಕಾರ್ಯದರ್ಶಿ ರಮೇಶ್ ನಾಯ್ಕ, ಬಸವರಾಜ್, ಚಂದ್ರು,ಟಿ.ಮಂಜುನಾಥ್,ಆನಂದ, ಮತ್ತು ಇತರರು ಇದ್ದರು.

Leave a Comment