ಅಟಲ್ ಸ್ಮಾರಕ ನಿರ್ಮಾಣ

ನವದೆಹಲಿ.ಆ.೧೭-ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಸ್ಮಾರಕವೊಂದನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಾಷ್ಟ್ರನಾಯಕರು ಹಾಗೂ ಅತಿಗಣ್ಯ ವ್ಯಕ್ತಿಗಳ ಅಂತ್ಯ ಸಂಸ್ಕಾರಕ್ಕೆ ಮೀಸಲಾದ ರಾಷ್ಟ್ರೀಯ ಸ್ಮತಿ ಸ್ಥಳದಲ್ಲಿ ಅವರ ಅಂತ್ಯಕ್ರಿಯೆ ನಡೆಸಿದರೂ, ದೇಶಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಎ.ಬಿ.ವಾಜಪೇಯಿ ಅವರ ಪ್ರತ್ಯೇಕ ಸ್ಮಾರಕ ನಿರ್ಮಿಸಲಾಗುವುದು ಎಂದು ಕೇಂದ್ರದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.
ಅಟಲ್‌ಜೀ ಮಹಾ ವ್ಯಕ್ತಿ. ಅವರು ದೇಶಕ್ಕೆ ನೀಡಿರುವ ಕೊಡುಗೆ ಅಮೂಲ್ಯ. ಅಂಥ ಧೀಮಂತ ವ್ಯಕ್ತಿ ರಾಷ್ಟ್ರಕ್ಕೆ ನೀಡಿರುವ ಸೇವೆಗಳನ್ನು ಗೌರವಿಸಲು ನಾವು ವಿಶಿಷ್ಟವಾದ ಕೆಲಸ ಮಾಡಲೇಬೇಕಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಮಾಜಿ ಪ್ರಧಾನಿ ಭಾರತ ರತ್ನ ವಾಜಪೇಯಿ ಅವರಿಗೆ ಸಂತಾಪ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ರಾತ್ರಿ ನಡೆದ ಸಚಿವ ಸಂಪುಟ ಸಭೈಯಲ್ಲಿ ಈ ಬಗ್ಗೆ ಯಾವುದೇ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ಅಟಲ್ ಗೌರವಾರ್ಥ ಪ್ರತ್ಯೇಕ ಸ್ಮಾರಕ ನಿರ್ಮಿಸಲು ನಿರ್ಧರಿಸಲಾಗಿದೆ ರಾಷ್ಟ್ರೀಯ ಸ್ಮತಿ ಸ್ಥಳದಿಂದ ಒಂದು ಭಾಗವನ್ನು ಪ್ರತ್ಯೇಕಗೊಳಿಸಿ ಅಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಅವರ ಸ್ಮಾರಕ ನಿರ್ಮಿಸುವ ಪ್ರಸ್ತಾವೂ ಇದೆ.

Leave a Comment