ಅಡ್ಡಾದಿಡ್ಡಿ ಕಾರು ಚಾಲನೆ: ಬಿಜೆಪಿ ಸಂಸದೆ ರೂಪಾ ಗಂಗೂಲಿ ಪುತ್ರ ಸೆರೆ

ಕೋಲ್ಕತಾ, ಆ ೧೬- ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದಲ್ಲದೇ, ಕೊಲ್ಕತ್ತಾ ಗಾಲ್ಫ್ ಕ್ಲಬ್ ಗೋಡೆಗೆ ಡಿಕ್ಕಿ ಹೊಡೆದು ಹಾನಿ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಸಂಸದೆ ರೂಪಾ ಗಂಗೂಲಿ ಅವರ ಪುತ್ರ ಆಕಾಶ್ ಮುಖರ್ಜಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ನಿನ್ನೆ ರಾತ್ರಿ ಆಕಾಶ್ ಮುಖರ್ಜಿ ಅವರನ್ನು ಜಾದವ್ಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು, ೨೭೯, ೪೨೭ ಮತ್ತು ಸೆಕ್ಷನ್ ಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ, ಇಂದು ಅವರನ್ನು ಅಲಿಪೋರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಯಲ್ ಕೋಲ್ಕತ್ತಾ ಗಾಲ್ಫ್ ಕೋರ್ಸ್ ಗೋಡೆಗೆ ಕಾರು ಅಪ್ಪಳಿಸಿದ್ದರಿಂದ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ . ಆರೋಪಿ ಮದ್ಯದ ಪ್ರಭಾವದಲ್ಲಿದ್ದರೆಯೇ ಎಂದು ಪರೀಕ್ಷಿಸಲೂ ವೈದ್ಯಕೀಯ ಪರೀಕ್ಷೆ ಸಹ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment