ಅನಧಿಕೃತವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಜಪ್ತಿ

ಕಲಬುರಗಿ,ಫೆ.23-ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಲಾಪೂರ ಮತ್ತು ಇಂಗಳಗಿ ಗ್ರಾಮದ ಕಾಗಿಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟ್ರ್ಯಾಕ್ಟರ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಲಾಡ್ಲಾಪೂರ ಗ್ರಾಮದಲ್ಲಿ 1 ಲಕ್ಷ ರೂಪಾಯಿ ಮೌಲ್ಯದ ಟ್ರ್ಯಾಕ್ಟರ್ ಮತ್ತು 1 ಸಾವಿರ ರೂಪಾಯಿ ಮೌಲ್ಯದ ಮರಳು ಮತ್ತು ಇಂಗಳಗಿ ಗ್ರಾಮದಲ್ಲಿ 75 ಸಾವಿರ ರೂಪಾಯಿ ಮೌಲ್ಯದ ಟ್ರ್ಯಾಕ್ಟರ್ ಮತ್ತು 1 ಸಾವಿರ ರೂಪಾಯಿ ಮೌಲ್ಯದ ಮರಳು ಜಪ್ತಿ ಮಾಡಿದ್ದಾರೆ.

ಖಚಿತ ಮಾಹಿತಿ ಮೇಲೆ ವಾಡಿ ಪಿಎಸ್ಐ ಹಾಗೂ ಸಿಬ್ಬಂದಿ ದಾಳಿ ನಡೆಸಿ ಟ್ರ್ಯಾಕ್ಟರ್ ಹಾಗೂ ಮರಳು ಜಪ್ತಿ ಮಾಡಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Comment