ಅನರ್ಹರನ್ನು ಸೋಲಿಸುವುದೇ ಪ್ರಮುಖ ಗುರಿ : ಸಿದ್ದು

ಮೈಸೂರು.ನ.17. ಮುಂದಿನ ತಿಂಗಳು ನಡೆಯಲಿರುವ ಉಪ ಚುನಾವಣೆಯಲ್ಲಿ ಅನರ್ಹರನ್ನು ಸೋಲಿಸುವುದೇ ನಮ್ಮ ಪ್ರಮುಖ ಗುರಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಿಗ್ಗೆ ನಗರದ ಹೊರವಲಯದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ವತಿಯಿಂದ ನಿರ್ಮಿಸಲಾಗುತ್ತಿರುವ ವಿದ್ಯಾರ್ಥಿನಿಲಯ ಕಟ್ಟಡದ ನಿರ್ಮಾಣ ಶಂಕು ಸ್ಥಾಪನ ಸಮಾರಂಭದಲ್ಲಿ ಪಾಲ್ಗೊಂಡು ಸುದ್ಧಿಗಾರರೊಂದಿಗೆ ಮಾತಾನಾಡುತ್ತಾ ಮುಂದಿನ ತಿಂಗಳು ನಡೆಯಲ್ಲಿರುವ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ ಅದರಲ್ಲಿ 12 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು .

ಕೆಲವರು ಈಗಾಗಲೇ ತಮ್ಮ ನಾಮ ಪತ್ರಗಳನ್ನು ಸಲ್ಲಿಸಿದ್ದು ಮುಂದಿನ ದಿನಗಳಲ್ಲಿ ಇನ್ನು ಉಳಿದವರು ತಮ್ಮ ನಾಮ ಪತ್ರಗಳನ್ನು ಸಲ್ಲಿಸಲಿದ್ದಾರೆ. ನಾನು ಈಗಾಗಲೇ ಅನರ್ಹರಿಗೆ ಟಾರ್ಗೆಟ್ ಆಗಿದ್ದೇನೆ. ಅವರನ್ನು ಅನರ್ಹ ಮಾಡಲು ನಾನೇ ಸೂತ್ರದಾರನೆಂದು ಅವರು ಬಿಂಬಿಸುತ್ತಿದು ಅವರನ್ನು ಸೋಲಿಸುವುದೆ ನನ್ನ ಪ್ರಮುಖ ಗುರಿ ಎಂದು ಹೇಳಿದ್ದ ಸಿದ್ಧರಾಮಯ್ಯನವರು ಚುನಾವಣೆಯ ಬಗ್ಗೆ ಎಲ್ಲ ಅಗತ್ಯ ಕಾರ್ಯಕ್ರಮಗಳನ್ನು ಕೈಕೊಳ್ಳುವುದಾಗಿ ತಿಳಿಸಿದರು.

Leave a Comment