ಅನಾರೋಗ್ಯ: ಮಹಿಳೆ ಆತ್ಮಹತ್ಯೆ

ತುರುವೇಕೆರೆ, ಜ. ೧೨- ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನನೊಂದು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಮ್ಮನಹಳ್ಳಿ ಗ್ರಾಮದ ವಾಸಿ ನಾಗರತ್ನ(37) ಎಂದು ಗುರುತಿಸಲಾಗಿದೆ. ಕಳೆದ 17 ವರ್ಷಗಳ ಹಿಂದೆ ದೇವರಾಜ್ ಎಂಬುವವರ ಜತೆ ವಿವಾಹವಾಗಿತ್ತು. ಇವರು ಬೆಂಗಳೂರಿನ ಎಗ್ಗನಹಳ್ಳಿ ಕ್ರಾಸ್‌ನಲ್ಲಿ ವಾಸವಿದ್ದರು. ಬೆಂಗಳೂರಿನಿಂದ ತುರುವೇಕೆರೆಗೆ ತಮ್ಮ ನೆಂಟರ ಮನೆಗೆ ಹೋಗುವುದಾಗಿ ಹೇಳಿ ಹೋದವರು ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆ ಸಮೀಪ ದನ ಮೇಯಿಸುವವರು ಶವ ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ನಾಗರತ್ನ ಸಾಯುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ನನ್ನ ಆರೋಗ್ಯ ಸರಿಯಿಲ್ಲದ್ದರಿಂದ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ತುರುವೇಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment