ಅನಾರೋಗ್ಯ: ವ್ಯಕ್ತಿ ಆತ್ಮಹತ್ಯೆ

ಕೊಡಿಗೇನಹಳ್ಳಿ (ಮಧುಗಿರಿ), ಆ. ೧೫- ಕಿಡ್ನಿ ವೈಫಲ್ಯದಿಂದ ಬೇಸತ್ತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡ ಆತ್ಮಹತ್ಯೆಗೆ ಶರಣಾಗಿರುಪ ಘಟನೆ ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊಬಳಿಯ ರಾಘವೇಂದ್ರ ಬಾರ್ ಮಾಲೀಕ ಶಂಭುಲಿಂಗ ಎಂಬುವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿ ತೀವ್ರ ನೋವು ಕಾಣಿಸಿಕೊಂಡಿದ್ದು, ನೋವಿನಿಂದ ಬೇಸತ್ತು ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪಿಎಸ್‌ಐ ಮೋಹನ್‌ಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment