ಅನಿಷ್ಟ ಪದ್ಧತಿ ನಿರ್ಮೂಲನೆಗೆ ಕರೆ

ರಾಯಚೂರು.ಫೆ.17- ಸುಸ್ಥಿರ ಸಮಾಜಕ್ಕೆ ಮಾರಕವಾಗಿರುವ ಬಾಲ್ಯವಿವಾಹ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಅಧಿಕಾರಿ ವರ್ಗ ಪಣತೊಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಡಾ.ಸುನಿತಾ ಸಿದ್ರಾಮ್ ಕರೆ ನೀಡಿದರು.

ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ ಜಂಟಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಬಾಲ್ಯವಿವಾಹ ನಿಷೇಧಾಧಿಕಾರಿಗಳ ಕರ್ತವ್ಯ ಕುರಿತಾದ ಕಾರ್ಯಗಾರವನ್ನುದ್ದೇಶಿಸಿ ಮಾತನಾಡಿದರು. ಬಾಲ್ಯವಿವಾಹ ನಿಷೇಧಕ್ಕೆ ಸರ್ಕಾರ ಏನೆಲ್ಲಾ ನಿಯಮ ರೂಪಿಸಿದರೂ, ಗ್ರಾಮೀಣ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ಪ್ರಕರಣ ಮರುಕಳಿಸುತ್ತಿರುವುದು ಖೇದಕರ.

ವಿಶೇಷಾಧಿಕಾರಿಗಳು ಜನ ಸಮುದಾಯದಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಬಾಲ್ಯವಿವಾಹ ನಿರ್ಮೂಲನೆಗೆ ಕಾರ್ಯಪ್ರವೃತ್ತರಾಗುವಂತೆ ಸಲಹೆ ನೀಡಿದರು. ವಕೀಲರ ಸಂಘದ ಸಂಪನ್ಮೂಲ ವ್ಯಕ್ತಿ ಜಿ.ಎಸ್.ವೀರಭದ್ರಪ್ಪ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ವಿಷಯ ಮಂಡಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾರಾಯಣಪ್ಪ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Comment