ಅನುದಾನ ಕಡಿತಗೊಳಿಸದಿರುವಂತೆ ದದ್ದಲ ಮನವಿ

ರಾಯಚೂರು.ಅ.23- ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾದ ಕಾಮಗಾರಿಗಳ ಅನುದಾನ ಕಡಿತಗೊಳಿಸದೇ, ಕೂಡಲೇ ಹಣ ಬಿಡುಗಡೆ ಮಾಡುವಂತೆ ಗ್ರಾಮೀಣ ಕ್ಷೇತ್ರದ ಶಾಸಕ ದದ್ದಲ ಬಸವನಗೌಡ ಅವರು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿದರು.
ಇಂದು ಬೆಂಗಳೂರಿನಲ್ಲಿ ಅವರ ಕಛೇರಿಯಲ್ಲಿ ಅವರನ್ನು ಭೇಟಿಯಾಗಿ ವಿಶೇಷವಾಗಿ ಮನವಿ ಮಾಡಿದರು. ಗ್ರಾಮಾಂತರ ಕ್ಷೇತ್ರ ಪರಿಶಿಷ್ಟ ಜಾತಿ, ಪಂಗಡ ಜನಸಂಖ್ಯೆ ಅಧಿಕವಾಗಿದ್ದು, ಇವರ ವಾಸಿಸುವ ಕಾಲೋನಿಗಳ ಅಭಿವೃದ್ಧಿ ಅತ್ಯವಶ್ಯಕವಾಗಿರುತ್ತದೆ. ಈಗಾಗಲೇ ಟೆಂಡರ್ ಹಂತದಲ್ಲಿರುವ ಅಪೇಂಡಿಕ್ಸ್-ಇ ಯೋಜನೆಯಡಿ ರಸ್ತೆ ಕಾಮಗಾರಿ ಪ್ರಕ್ರಿಯೆ ಪೂರ್ಣಗೊಳಿಸಿ, ಅನುದಾನ ನೀಡುವುದು, ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಶೀಘ್ರವೇ ಅನುದಾನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆರ್.ವೆಂಕಟಸ್ವಾಮಿ ಅವರು ಉಪಸ್ಥಿತರಿದ್ದರು.

Leave a Comment