ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಹಾವೇರಿ ಜು 11 – ಹಾಲಿನ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್‍ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ವರದಾಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹಾಲಿನ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದರಿಂದ ಕ್ಯಾಂಟರನಲ್ಲಿ ಸಿಲುಕಿದ್ದ ಚಾಲಕ ಹಾಗೂ  ಕ್ಲೀನರ್‍ನನ್ನು ಪೊಲೀಸರು ರಕ್ಷಿಸಿದ್ದಾರೆಂದು ತಿಳಿದು ಬಂದಿದೆ.
ಮೋಹನ, ವಿಶ್ವ ಎಂಬಾತರೇ ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment