ಅಪಘಾತ: ಇಬ್ಬರು ಸಾವು

ತುಮಕೂರು, ಆ. ೨೩- ರಸ್ತೆಬದಿ ಕೆಟ್ಟು ನಿಂತಿದ್ದ ಲಾರಿಗೆ ಟೊಮೆಟೋ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೋರಾ ಪೊಲೀಸ್ ಠಾಣೆ ಸರಹದ್ದಿನಲ್ಲಿ ನಡೆದಿದೆ.
ಮೃತಪಟ್ಟವರನ್ನು ಲಾರಿ ಚಾಲಕ ವೀರೇಶ್ (24) ಹಾಗೂ ಶ್ರೀನಿವಾಸ್ (32) ಎಂದು ಗುರುತಿಸಲಾಗಿದೆ.
ಚಳ್ಳಕೆರೆಯಿಂದ ಟೊಮೆಟೋ ತುಂಬಿಕೊಂಡು ಕೋಲಾರಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನ ಮಾರ್ಗಮಧ್ಯೆ ರಾಷ್ಟ್ರೀಯ ಹೆದ್ದಾರಿ-48ರ ತಿಮ್ಮರಾಜನಹಳ್ಳಇ ಮಸೀದಿ ಬಳಿ ಕೆಟ್ಟು ನಿಂತಿದ್ದ ಮತ್ತೊಂದು ಲಾರಿಗೆ ಅಪ್ಪಳಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
ಈ ಸಂಬಂಧ ಕೋರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment