ಅಪಘಾತ: ಪ್ರಯಾಣಿಕ ಸಾವು

ಗುಬ್ಬಿ, ಸೆ. ೩- ಅಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಿಟ್ಟೂರು ಸಮೀಪದ ಮಾರುತಿರೈಸ್ ಮಿಲ್ ಮುಂಭಾಗ ನಡೆದಿದೆ.

ಮೃತಪಟ್ಟವರನ್ನು ಮಾರಶೆಟ್ಟಿಹಳ್ಳಿ ಗ್ರಾಮದ ವಾಸಿ ಚಿತ್ತಯ್ಯ(50) ಎಂದು ಗುರುತಿಸಲಾಗಿದೆ. ಆಟೋದಲ್ಲಿದ್ದ ಉಳಿದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಟ್ಟೂರು ಕಡೆಯಿಂದ ಪ್ರಯಾಣಿಕರನ್ನು ಕರೆತರುತ್ತಿದ್ದ ಆಟೋ ತಿಪಟೂರು ಕಡೆಯಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

ಈ ಸಂಬಂಧ ಗುಬ್ಬಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment