ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

ಕುಣಿಗಲ್, ಡಿ. ೬- ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಹೊಸಕೆರೆ ಚೌಡಮ್ಮದೇವಿಯ ವೃತ್ತದ ಬಳಿ ನಡೆದಿದೆ.

ಹುತ್ರಿದುರ್ಗ ಹೋಬಳಿ ಹೊಸಕೆರೆ ಗ್ರಾಮದ ನಿವಾಸಿ ಕೆಂಚಮಾರಯ್ಯ (40) ಎಂಬುವರೇ ಮೃತಪಟ್ಟಿರುವ ದುರ್ದೈವಿ. ಇವರು ಪಟ್ಟಣದ ಎಪಿಎಂಸಿಯಲ್ಲಿ ರೇಷನ್ ಕೊಡುವ ಕೆಲಸಗಾರರಾಗಿದ್ದು, ಕೆಲಸ ಮುಗಿಸಿಕೊಂಡು ವಾಪಾಸ್ಸಾಗುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ದಾರಿಹೋಕರು ಅದನ್ನು ಕಂಡು ಪಟ್ಟಣದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕುಣಿಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment