ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

ತುಮಕೂರು, ಜು. ೧೨- ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಗುರುತು, ವಿಳಾಸ ಪತ್ತೆಯಾಗಿಲ್ಲ. ರಾತ್ರಿ ವೇಳೆಯಲ್ಲಿ ಹೆದ್ದಾರಿ ದಾಟುತ್ತಿದ್ದಾಗ ಯಾವುದೋ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment