ಅಪರಿಚಿತ ವ್ಯಕ್ತಿಗಳ ಶವ ಪತ್ತೆ

ತುಮಕೂರು, ಏ. ೧೩- ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದ ಅಪರಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಗೆ ಸುಮಾರು 45 ವರ್ಷ ವಯಸ್ಸಾಗಿದ್ದು, ಮೂರು ದಿನಗಳ ಹಿಂದೆ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸಾರ್ವಜನಿಕರು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು.

ಕಾಫಿ ಬಣ್ಣ ಅಂಗಿ ಧರಿಸಿದ್ದು ಕೋಲು ಮುಖದವರಾಗಿದ್ದಾರೆ. ಎರಡು ಕಿವಿಗಳಲ್ಲಿ ರಿಂಗ್ ಹಾಕಿದ್ದಾರೆ ಎಂದು ನಗರ ಠಾಣೆ ಪೊಲೀಸರು ಹೇಳಿದ್ದಾರೆ.
ವಾರಸುದಾರರು ಇದ್ದಲ್ಲಿ ನಗರಠಾಣೆ ಸಬ್‌ಇನ್‌ಸ್ಪೆಕ್ಟರ್-ಮೊಬೈಲ್ ಸಂಖ್ಯೆ: 9480802945 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಅದೇ ರೀತಿ ಕ್ಯಾತ್ಸಂದ್ರ ಹಾಗೂ ತುಮಕೂರು ರೈಲ್ವೆ ನಿಲ್ದಾಣದ ನಡುವೆ ಚಲಿಸುವ ರೈಲಿಗೆ ಸಿಲುಕಿ ಅಂದಾಜು 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಎಣ್ಣೆಗೆಂಪು ಬಣ್ಣದವರಾಗಿದ್ದು, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಬಣ್ಣದ ತುಂಬು ತೋಳಿನ ಅಂಗಿ ಧರಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಮೊಬೈಲ್- 9480802142 ಸಂಪರ್ಕಿಸಬಹುದು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

Leave a Comment