ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ

 

ಕಲಬುರಗಿ,ಜ.21-ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ನ್ಯಾಯಾಲಯ ಕಠಿಣ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿದೆ.

ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕುಸರಂಪಳ್ಳಿ ಗ್ರಾಮದ ಶಿವಕುಮಾರ ಸಿದ್ದಣ್ಣಾ ಅಲಿಯಾಸ್ ಸಿದ್ದಪ್ಪಾ ಚನ್ನಮನೋರ ಎಂಬಾತ ಮದುವೆಯಾಗುವುದಾಗಿ ನಂಬಿಸಿ 2017ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಇಸ್ಮಾಯಿಲ್ ಶರೀಫ್ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಸದರಿ ಪ್ರಕರಣದ ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್.ಅವರು ಆರೋಪಿಗೆ 50 ಸಾವಿರ ರೂಪಾಯಿ ದಂಡ ಮತ್ತು ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 5 ಲಕ್ಷ ರೂಪಾಯಿ ಹರಿಹಾರ ನೀಡುವಂತೆ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೋ) ಎಲ್.ವಿ.ಚಟ್ನಾಳಕರ್ ವಾದ ಮಂಡಿಸಿದ್ದರು.

Leave a Comment