ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ಕಠಿಣ ಶಿಕ್ಷೆ

ಕಲಬುರಗಿ,ಜು.12-ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಆರೋಪಿ ಅಂಜಲಪ್ಪ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಕುರಕುಂಟಾ ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮಣ ಅವರು ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲಪ್ಪ ಎಸ್.ಅವರು ಆರೋಪಿಗೆ 4 ವರ್ಷ ಕಠಿಣ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ ಸರ್ಕಾರದಿಂದ 25 ಸಾವಿರ ರೂ. ಪರಿಹಾರ ನೀಡಿದ್ದು, ಆರೋಪಿ ದಂಡದ ಹಣ ಸಂದಾಯ ಮಾಡದಿದ್ದಲ್ಲಿ 1 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೋ) ಎಲ್.ವಿ.ಚಟ್ನಾಳಕರ್ ವಾದ ಮಂಡಿಸಿದ್ದರು.

Leave a Comment