ಅಪ್ರಾಪ್ತ ಬಾಲಕಿಯ ಮೇಲೆ ಮಾವನಿಂದಲೇ ಅತ್ಯಾಚಾರ

(ನಮ್ಮ ಪ್ರತಿನಿಧಿಯಿಂದ)

ಕಲಬುರಗಿ,ಜು.12-ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸೋದರ ಮಾವನೇ ಅತ್ಯಾಚಾರವೆಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಚಿತ್ತಾಪುರ ತಾಲ್ಲೂಕಿನ ಲಕ್ಷ್ಮೀಪುರ ವಾಡಿಯ ಶಿವಾ ತಂದೆ ತುಕಾರಾಮ ರಾಠೋಡ್ ಎಂಬಾತನೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ.

ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ತೋರಿಸಿಕೊಳ್ಳಲೆಂದು ಮನೆಗೆ ಬಂದಿದ್ದ ಶಿವಾ ರಾಠೋಡ್ ತನ್ನ ಮೇಲೆ ಅತ್ಯಾಚಾರ ವೆಸಗಿದ್ದಲ್ಲದೆ ಈ ವಿಷಯ ಮನೆಯಲ್ಲಿ ಹೇಳಿದರೆ ತನ್ನನ್ನು ಮತ್ತು ತನ್ನ ಸಹೋದರನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರುವ ದೂರು ಸಲ್ಲಿಸಿದ್ದಾಳೆ.

ಅತ್ಯಾಚಾರವೆಸಗಿದ್ದರಿಂದ ಗರ್ಭಿಣಿಯಾಗಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮೀಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment