‘ಅಭಿವೃದ್ದಿಗೆ ನಳಿನ್ ಏನೂ ಮಾಡಿಲ್ಲ’

ಮಂಗಳೂರು, ಏ.೧೬- ಕಳೆದ ೧೦ ವರ್ಷಗಳಲ್ಲಿ ದ.ಕ. ಸಂಸದ, ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಅವರು ಅಭಿವೃದ್ಧಿ ವಿಚಾರದಲ್ಲಿ ಮಾಡಿರುವ ಸಾಧನೆಯ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಸಚಿವ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ನಳಿನ್ ಏನೂ ಮಾಡಿಲ್ಲ. ಇರುವ ಅವಕಾಶವನ್ನು ಕಳಕೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರನ್ನು ಗೆಲ್ಲಿಸುವ ಮೂಲಕ ಪಾರ್ಲಿಮೆಂಟ್ ನಲ್ಲಿ ಧ್ವನಿ ಎತ್ತುವಂತೆ ಮಾಡಬೇಕು ಎಂದರು. ಮಿಥುನ್ ಹನುಮಂತನ ಭಕ್ತ, ಬಂಟ ಯುವಕ, ಹಿಂದೂ ಸಂಸ್ಕೃತಿಯ ಬಗ್ಗೆ ಮತ್ತು ಜಾತ್ಯತೀತ ತತ್ವದಲ್ಲಿ ಅಪಾರ ನಂಬಿಕೆಯುಳ್ಳವರು. ಅವರು ಗೆದ್ದಲ್ಲಿ ನಳಿನ್ ರ ಹಾಗೆ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸ ಮಾಡುವುದಿಲ್ಲ. ಅಭಿವೃದ್ದಿ ಮಾಡಿ ತೋರಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ನಾಯಕರಾದ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರ್ ಗಳಾದ ಭಾಸ್ಕರ ಮೊಯ್ಲಿ, ಮಹಾಬಲ ಮಾರ್ಲ, ಶಶಿಧರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Leave a Comment