ಅಮಾನವೀಯ ಕೃತ್ಯ ತಡೆಯಲು ‘ವಿಶೇಷ ನ್ಯಾಯಾಲಯ’ ಸ್ಥಾಪಿಸಿ

ಮೈಸೂರು,ಜೂ.14 : ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಮಾನವೀಯ ಕೃತ್ಯ ತಡೆಯುವ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ನ್ಯಾಯಾಲಯ ಸ್ಥಾಪಿಸಿ ತ್ವರಿತ ವಿಚಾರಣೆ ನಡೆಸಿ ಆರೋಪಿಗಳಿಗೆ ಶೀಘ್ರ ಶಿಕ್ಷೆ ವಿಧಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಶಿವರಾಮು ಒತ್ತಾಯಿಸಿದರು.
ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುಳ್ವಾಡಿ ವಿಷ ಪ್ರಸಾದ ದುರ್ಘಟನೆ ಮಾಸುವ ಮುನ್ನವೇ ಗುಂಡ್ಲುಪೇಟೆಯ ಪ್ರತಾಪ್ ಎಂಬ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿರುವುದು ಹಾಗೂ ರಾಮನಗರದಲ್ಲಿ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಹೀನಾಯವಾಗಿ ನಡೆಸಿಕೊಂಡಿರುವ ಘಟನೆಗಳನ್ನು ಪ್ರಸ್ತಾಪಿಸಿ. ಇಂತಹ ಪ್ರಕರಣಗಳ ಕಡಿವಾಣಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ ವಿಧಿಸಬೇಕು, ಆಗ ಮಾತ್ರ ಇಂತಹ ಘಟನೆಗಳನ್ನು ತಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
@12bc = ಹಿಂದೂವಾಗಿದ್ದರು ಮೌನವೇಕೆ ? :
ಪ್ರತಾಪ್ ಒಬ್ಬ ಹಿಂದು ಯುವಕ, ಹೀಗಿದ್ದರೂ ಬಜರಂಗದಳ, ಶ್ರೀರಾಮಸೇನೆ, ಆರ್.ಎಸ್.ಎಸ್ ನಂತಹ ಸಂಘಟನೆಗಳು ಮೌನವಾಗಿರುವುದೇಕೆ, ಅಲ್ಲದೇ ರಾಜ್ಯದಲ್ಲಿ 7 ಜನ ದಲಿತರು ಸಂಸದರಾಗಿ ಆಯ್ಕೆಯಾಗಿದ್ದರು ಯಾರೊಬ್ಬರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ, ಸಂಸದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಹಾಗೂ ಶಾಸಕ ಸಿ.ಟಿ.ರವಿ ಇವರುಗಳೇಕೆ ಧ್ವನಿಯೇತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳಿಗೆ, ಪ್ರಧಾನಿಗಳಿಗೆ, ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ದಿ.17ರಂದು ಗುಂಡ್ಲುಪೇಟೆಯಿಂದ ನಡೆಯುತ್ತಿರುವ ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ಹೇಳಿದರು.
ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿ, ಜಾತಿ, ಧರ್ಮ, ಮೌಡ್ಯ, ಕಂದಾಚಾರಗಳನ್ನು ತೊಡೆದು ಮಾನವೀಯ ಧರ್ಮ ಉಳಿಸಲು ಜಾತ್ಯಾತೀತ ಬದುಕನ್ನು ರೂಢಿಸಿಕೊಳ್ಳಬೇಕಿದೆ ಎಂದರು.
ಕಾಂಗ್ರೆಸ್ ನ ಡೈರಿ ವೆಂಕಟೇಶ್ ಇತರರು ಗೋಷ್ಠಿಯಲ್ಲಿ ಹಾಜರಿದ್ದರು.

Leave a Comment