ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆ

ನವದೆಹಲಿ, ಫೆ 19 – ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಮಾಡುವ ಉದ್ದೇಶದಿಂದ ರಚನೆಯಾಗಿರುವ “ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮೊದಲ ಸಭೆ ಇಂದು ರಾಜಧಾನಿ ದೆಹಲಿಯಲ್ಲಿ ನಡೆಯಲಿದೆ.
ಸಭೆಯಲ್ಲಿ ರಾಮಮಂದಿರ ನಿರ್ಮಾಣ ಶುಭ ಕಾರ್ಯದ ದಿನ ನಿಗದಿಯಾಗುವ ಸಾಧ್ಯತೆಯಿದೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಟ್ರಸ್ಟ್ ರಚನೆಯಾಗಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ 15 ಸದಸ್ಯರ ಟ್ರಸ್ಟ್ ರಚಿಸಲು ತೀರ್ಮಾನಿಸಲಾಗಿತ್ತು.

ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ದೇವಾಲಯ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದ ನಂತರ ಕಾಲ ಮಿತಿಯಲ್ಲಿ ರಾಮಮಂದಿರ ನಿರ್ಮಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.
೧೫ ಸದಸ್ಯರ ಈ ಟ್ರಸ್ಟ್ ನಲ್ಲಿ ಧಾರ್ಮಿಕ ಮುಖಂಡರು, ಗಣ್ಯರು ಇದ್ದು, ಮಂದಿರದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

Leave a Comment