ಆಕ್ಲೆಂಡ್‌ಗೆ ಬಂದಿಳಿದ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ

ಆಕ್ಲೆಂಡ್,ಜ ೨೧-  ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಹಾಗೂ ಏಕದಿನ ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ ಸದ್ಯ ನ್ಯೂಜಿಲೆಂಡ್ ಪ್ರವಾಸಕ್ಕೆ ಸಜ್ಜಾಗಿದೆ.

ನ್ಯೂಜಿಲೆಂಡ್ ಪ್ರವಾಸದ ನಿಮಿತ್ತ ಆಕ್ಲೆಂಡ್‌ಗೆ ಬಂದಿಳಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾಕ್ಕೆ ವಿಮಾನ ಸಿಲ್ದಾಣದಲ್ಲಿ ಭರ್ಜರಿ ಸ್ವಾಗತಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಟೀಂ ಇಂಡಿಯಾ ಆಟಗಾರರು  ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಹರ್ಷೊದ್ಘಾರ ಕೂಗಿ ಸ್ವಾಗತಿಸಿದ್ದಾರೆ. ಪ್ರವಾಸದಲ್ಲಿ ಐದು ಏಕದಿನ ಹಾಗೂ ಮೂರು ಟಿ ಟ್ವೆಂಟಿ ಅಂತಾರಾಷ್ಟ್ರೀಯ ಪಂದ್ಯಗಳಿದ್ದು, ಬುಧವಾರದಿಂದ ಪಂದ್ಯ ಪ್ರಾರಂಭವಾಗಲಿದೆ.

ಭಾರತ ತಂಡ ಆಕ್ಲೆಂಡ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಕ್ರಿಕೆಟ್ ಸರಣಿಗೆ ಆಕ್ಲೆಂಡ್ ನಿಮಗೆ ಸ್ವಾಗತ ಕೋರುತ್ತದೆ ಎಂದು ಬರೆದುಕೊಂಡಿದೆ.

Leave a Comment