ಆಟಿಕೆ ವಿಮಾನ ಹಾರಾಟ 18 ರಂದು

 

ಕಲಬುರಗಿ ಸೆ 12: ಬರುವ ಸೆಪ್ಟೆಂಬರ್ 17 ರಂದು ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಚಾಲನೆ ನೀಡದಿದ್ದರೆ, ಸೆ.18 ರಂದು ಬೆಳಿಗ್ಗೆ 11 ಕ್ಕೆ ಹಲವಾರು  ಮಕ್ಕಳಿಂದ ಆಟಿಕೆ ವಿಮಾನಗಳ ಹಾರಾಟ ನಡೆಸಿ ವಿನೂತನ ಪ್ರತಿಭಟನೆ ನಡೆಸಲಾಗುವದು ಎಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಸಚಿನ್ ಪರತಾಬಾದ ಅವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೆ. 17 ರಂದು ವಿಮೋಚನಾ ದಿನಾಚರಣೆ ಧ್ವಜಾರೋಹಣಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಆಗಮಿಸುತ್ತಿದ್ದಾರೆ.ಕಲಬುರಗಿ ವಿಮಾನ ನಿಲ್ದಾಣದಲ್ಲಿ  ಹುದ್ದೆಗಳನ್ನು ಭರ್ತಿ ಮಾಡುವಾಗ 371(ಜೆ) ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಇದಕ್ಕೆ ಅಗತ್ಯವಿರುವ ತಿದ್ದುಪಡಿ ತರಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವದು ಎಂದರು.

ಸುದ್ದಿಗೋಷ್ಠಿಯಲ್ಲಿ ಸುರೇಶ ಹನಗುಡಿ,ಖಾಜಾಪಾಶಾ ಭಾಗಬಾನ್,ಮಲ್ಲು ಉಪಸ್ಥಿತರಿದ್ದರು..

Leave a Comment