ಆಡಳಿತ ನಡೆಸಲು ಬಾರದವರು ಹೀಗೆಯೆ ಹೇಳುವುದು-ಸಿದ್ದರಾಮಯ್ಯ ತಿರುಗೇಟು

ಮೈಸೂರು,ಆ 25. ಎಚ್ ಡಿ ಕುಮಾರಸ್ವಾಮಿ ತಮ್ಮನ್ನು ಶತ್ರುವಿನಂತೆ ನೋಡಿದ್ದೆ  ಮೈತ್ರಿ ಸರ್ಕಾರ ಪತನವಾಗಲು ಈ ಸಮಸ್ಯೆಗೆ ಕಾರಣವಾಗಿದ್ದು,ತಮ್ಮನ್ನು ಮಿತ್ರನಂತೆ ಅಥವಾ ಮೈತ್ರಿ ಪಕ್ಷದವರಂತೆ ಅವರು ನೋಡಿದಿದ್ದರೆ ಏನೂ ಆಗುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮನ್ನ ಶತ್ರು ಅಂದುಕೊಂಡು ದ್ವೇಷ ಸಾಧಿಸುತ್ತಲೇ ಬಂದರು. ಪ್ರೀತಿಯಿಂದ ನೋಡಿ, ಸ್ನೇಹಿತನಂತೆ ಕಂಡಿದ್ದರೆ ಏನೂ ಆಗುತ್ತಿರಲಿಲ್ಲ.ಕನಿಷ್ಠ ಪಕ್ಷ ಮೈತ್ರಿ ಪಕ್ಷದ ನಾಯಕನಂತೆಯೂ ತಮ್ಮನ್ನು ಅವರು ಕಾಣಲಿಲ್ಲ.ಹೀಗಾಗಿ ಇಷ್ಟೆಲ್ಲಾ ಸಮಸ್ಯೆ ಆಗಿದೆ ಎಂದು ಸ್ಪಷ್ಟೀಕರಣ ನೀಡಿದರು.

ಕಾಂಗ್ರೆಸ್ ನಾಯಕರು ತಮ್ಮನ್ನು ಗುಮಾಸ್ತನಂತೆ  ನಡೆಸಿಕೊಂಡರು ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದರು.ಅಧಿಕಾರ ನಡೆಸಲು ಬಾರದವರು ಹೀಗೆಯೇ ಹೇಳುವುದು.ಅದಕ್ಕೆ ನಾವೇನು ಮಾಡುವುದಕ್ಕೆ ಸಾಧ್ಯವಾಗುತ್ತದೆ ಎಂದು ಟೀಕಾಪ್ರಹಾರ ನಡೆಸಿದರು.

 ಬಿಜೆಪಿ ಹೈಕಮಾಂಡ್‌ಗೆ ಯಡಿಯೂರಪ್ಪ ಒಲ್ಲದ ಶಿಶು.ಒಂದು ತಿಂಗಳಿನಿಂದ ರಾಜ್ಯದಲ್ಲಿ ಸರ್ಕಾರವೇ ಇಲ್ಲ.ಯಡಿಯೂರಪ್ಪ ದೆಹಲಿಯಿಂದ ಬೆಂಗಳೂರಿಗೆ,ಬೆಂಗಳೂರಿನಿಂದ ದೆಹಲಿಗೆ ಓಡಾಡುತ್ತಿದ್ದಾರೆ.ವಿಚಿತ್ರ್ವೆಂದರೆ ಅಮಿತ್ ಷಾ ಯಡಿಯೂರಪ್ಪರನ್ನು ಅವರು ಭೇಟಿಯೂ ಮಾಡುತ್ತಿಲ್ಲ.ಸರ್ಕಾರ ನಡೆಸಲು ಸ್ವಾತಂತ್ರ್ಯವನ್ನು ಬಿಜೆಪಿ ಹೈಕಮಾಂಡ್ ನೀಡುತ್ತಿಲ್ಲ.ಬಿಜೆಪಿ ಸರ್ವಾಧಿಕಾರದ ಆಡಳಿತದಲ್ಲಿ ನಂಬಿಕೆ ಜಾಸ್ತಿ.

 ಯಡಿಯೂರಪ್ಪನವರ ಆಡಳಿತವನ್ನು ಬಿಜೆಪಿ ಹೈಕಮಾಂಡ್ ತನ್ನ ಕೈಹಿಡಿತದಲ್ಲಿ ಇಟ್ಟುಕೊಂಡಿದೆ ಎಂದು ಅವರು ಆರೋಪಿಸಿದರು.

 ರಾಜ್ಯದಲ್ಲಿ ತೀವ್ರ ನೆರೆ, ಬರ ಇದ್ದರೂ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಕೂಡ ಮುಖ್ಯಮಂತ್ರಿ ರಾಜ್ಯಕ್ಕೆ ತರಲು ಸಾಧ್ಯವಾಗಲಿಲ್ಲ.ಇವರು ಸಚಿವರಿಗೆ ಖಾತೆ ಹಂಚಿಕೆಯನ್ನು ಮಾಡಲು ಸಾಧ್ಯವಾಗಲಿಲ್ಲ,ರಾಜ್ಯದ ಮತದಾರರು ಬಿಜೆಪಿಗೆ 113 ಬಹುಮತದ ಸಂಖ್ಯೆಯನ್ನು ನೀಡಿಲ್ಲ.ಹೈಕಮಾಂಡ್ಗೂ ಯಡಿಯೂರಪ್ಪ ಬೇಕಾಗಿಲ್ಲ. ಇಬ್ಬರ ಮಧ್ಯೆ ತಿಕ್ಕಾಟದಲ್ಲಿ ರಾಜ್ಯದಲ್ಲಿ ಒಂದು ತಿಂಗಳಿನಿಂದ ಸರ್ಕಾರ ಇಲ್ಲದಂತಾಗಿದೆ ಎಂದು ಅವರು ವ್ಯಂಗ್ಯವಾಡಿದರು.

ಅನೈತಿಕವಾಗಿ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಿದ್ದು,ಅಸಂವಿಧಾನಾತ್ಮಕವಾಗಿ ಅಧಿಕಾರಕ್ಕೆ ಹಿಡಿದಿದೆ. ಹಿಂಬಾಗಿಲಿನಿಂದ ಕುದುರೆ ವ್ಯಾಪಾರ ಮಾಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಅನರ್ಹ ಶಾಸಕರು,ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರು ಧಮ್ಕಿ ಹಾಕುತ್ತಿದ್ದಾರೆ. ಬಿಜೆಪಿಯಲ್ಲೂ ತುಂಬಾ ಜನ ಅತೃಪ್ತರಿದ್ದಾರೆ,ಆದ್ದರಿಂದಲೇ ಅವರಿಗೆ  ಖಾತೆ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಲೇವಡಿ ಅವರು ಮಾಡಿದರು.

 ಅನರ್ಹ ಶಾಸಕರು ಅತಂತ್ರರಾಗಿದ್ದಾರೆ ಎಂಬ ಪ್ರಶ‍್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಅತಂತ್ರರಾಗಲಿ ಎಂದು ನಾವು ಶಾಸಕರನ್ನು ಅನರ್ಹಗೊಳಿಸುವಂತೆ ಮಾಡಿದ್ದು, ಅವರು ಅತಂತ್ರರಾಗಬೇಕು ಎನ್ನುವುದೇ ನಮ್ಮ ಆಶಯವಾಗಿತ್ತು ಎಂದು  ಅವರು ಕಿಡಿಕಾರಿದರು

Leave a Comment