ಆತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ

 

ಅಲೀಗಢ(ಉತ್ತರ ಪ್ರದೇಶ),ಸೆ.೧೧-ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಅಲೀಗಢದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯನ್ನು ಇಬ್ಬರು ಯುವಕರು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ. ಆದರೆ ಬಾಲಕಿ ಈ ಬಗ್ಗೆ ಪೋಕಷರಿಗೆ ತಿಳಿಸದೇ ಎರಡು ದಿನ ರಹಸ್ಯವಾಗಿಟ್ಟಿದ್ದಾಳೆ.
ನಂತರ ತೀವ್ರ ಮನನೊಂದ ಬಾಲಕಿ ಸೋಮವಾರ ಸೀಮೆಎಣ್ಣೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿದ್ದು, ಇಬ್ಬರು ಆರೋಪಿಗನ್ನು ಪೊಲೀಸರು ಬಂಧಿಸಿದ್ದಾರೆ.

Leave a Comment