ಆನ್ ಲೈನ್ ಮೂಲಕ ದ್ರಾಕ್ಷಿ ಮಾರಾಟಕ್ಕೆ ಕ್ರಮ – ಸಚಿವ ಬಿ.ಸಿ.ಪಾಟೀಲ್

ವಿಜಯಪುರ : ರೈತ ಸಮುದಾಯಕ್ಕಾಗುವ ತೊಂದರೆ ಇಡೀ ದೇಶಕ್ಕಾಗುವ ತೊಂದರೆಯಿದ್ದಂತೆ. ಹೀಗಾಗಿ ರೈತ ಸಮುದಾಯಕ್ಕೆ‌ ಅನುಕೂಲವಾಗಲೆಂದು ಕೃಷಿ ಉತ್ಪನ್ನಗಳ ಸುಲಲಿತ ಮಾರಾಟಕ್ಕೆ ಅಂತರಾಜ್ಯ ನಿರ್ಬಂಧಗಳನ್ನು ಸಹ ತೆಗೆದುಹಾಕಲಾಗಿದೆ. ದ್ರಾಕ್ಷಿ ಬೆಳೆದ ರೈತರಿಗೆ ತೊಂದರೆಯಾಗದಂತೆ ಆನ್ ಲೈನ್ ಮೂಲಕ ದ್ರಾಕ್ಷಿಯ ಮಾರಾಟಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಸಚಿವರು ಕೊರೊನಾ ಹಿನ್ನಲೆಯಲ್ಲಿ ರೈತ ಮತ್ತು ಕೃಷಿ ಚಟುವಟಿಕೆಗಳ ಕುರಿತು ಜಿಲ್ಲಾ ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಕೃಷಿ ಸಚಿವ ಬಿ.ಸಿ.‌ಪಾಟೀಲ್ ಅವರಿಂದು ವಿಜಯಪುರ ಜಿಲ್ಲಾ ಕೃಷಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿ ರೈತರು – ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ‘ ಜಿಲ್ಲೆಯಲ್ಲಿ ಪ್ರಸ್ತುತ ಯಾವುದೇ ಕೃಷಿ ಚಟುವಟಿಕೆ ನಡೆಯುತ್ತಿಲ್ಲ. ಈ ಚಟುವಟಿಕೆಗಳು ಜೂನ್ ನಂತರ ಪ್ರಾರಂಭವಾಗಲಿದ್ದು ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿತ್ತನೆಬೀಜ – ರಸಗೊಬ್ಬರ – ಕೀಟನಾಶಕ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

Leave a Comment