ಆರ್ಥಿಕ ಬಲವರ್ಧನೆ ಹೊಂದಲು ಕರೆ

ಸಿಂಧನೂರು.ಜ.11- ಸ್ತ್ರೀಶಕ್ತಿ ಗುಂಪುಗಳನ್ನು ಅಧಿಕವಾಗಿ ರಚನೆ ಮಾಡುವ ಮೂಲಕ ಮಹಿಳೆಯರು ಆರ್ಥಿಕವಾಗಿ ಬಲವರ್ಧನೆ ಹೊಂದುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಕರೆ ನೀಡಿದರು.

ಪಟ್ಟಣದ ಅಂಬಾ ಮಠದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಹಾಗೂ ಇತರೆ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಸ್ತು ಪ್ರದರ್ಶನ ಮಾರಾಟದ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಮಣಿಯರು ಸ್ತ್ರೀಶಕ್ತಿ ಗುಂಪುಗಳನ್ನು ಅಧಿಕವಾಗಿ ರಚನೆ ಮಾಡುವ ಮೂಲಕ ಆರ್ಥಿಕವಾಗಿ ಬಲವರ್ಧನೆ ಹೊಂದಿ ಸ್ವಾವಲಂಬಿ ಜೀವನ ನಡೆಸುವಂತೆ ಸಲಹೆ ನೀಡಿದರು.
ಶಾಸಕ ಹಂಪನಗೌಡ ಬಾದರ್ಲಿ, ಜಿ.ಪಂ. ಸದಸ್ಯರಾದ ಬಸವರಾಜ ಹಿರೇಗೌಡ, ತಾ.ಪಂ.ಸದಸ್ಯ ಗೋವಿಂದ ರಾಜ, ಹನುಮೇಶ, ವೆಂಕಟರೆಡ್ಡಿ ಗಾಳಿ, ಜಿಲ್ಲಾ ಯೋಜನಾಧಿಕಾರಿ ಗೋಪಾಲ್ ನಾಯಕ, ಮುಖಂಡರಾದ ಪರಮೇಶಪ್ಪ ದಢೆಸೂಗೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅಶೋಕ, ಯೋಗಿತಾ ಬಾಯಿ, ಈರಮ್ಮ, ಶ್ರೀದೇವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Comment