ಆರ್ಥಿಕ ಹಿಂಜರಿತದ ವಿರುದ್ಧ ರಾಷ್ಟ್ರಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ,ಸೆ.12: ದೇಶದ ಆರ್ಥಿಕ ಹಿಂಜರಿತ ವಿರುದ್ಧ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಅಕ್ಟೋಬರ್ 15-25ರವರೆಗೆ ರಾಷ್ಟ್ರಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಶಾಸಕಾಂಗ ಪಕ್ಷದ ನಾಯಕರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

10 ದಿನಗಳ ಕಾಲ ಪ್ರತಿಭಟನೆ ನಡೆಯಲಿದೆ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲೂ ಕೂಡ ಆರ್ಥಿಕ ಹಿಂಜರಿತ ಕಾರ ಹಾಗೂ ಪರಿಣಾಮವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಲಿದ್ದೇವೆ ಎಂದರು.

ಕೆಲವು ದಿನಗಳ ಹಿಂದೆ ದೇಶದ ಅರ್ಥವ್ಯವಸ್ಥೆಯ ಸ್ಥಿತಿ ಗಂಭೀರವಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದರು, ದ್ವೇಷ ಬಿಟ್ಟು ಆರ್ಥಿಕತೆಯತ್ತ ಗಮನ ನೀಡಿ ಎಂದು ಸಲಹೆಯನ್ನೂ ಕೂಡ ಅವರು ನೀಡಿದ್ದರು.

ದೇಶದಲ್ಲಿ ಆರ್ಥಿಕ ಹಿಂಜರಿತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಉದ್ಯಮ ವಲಯಕ್ಕೆ ಭಾರೀ ಹೊಡೆದ ಬಿದ್ದಿದೆ. ಉತ್ಪಾದನೆ ಕುಸಿತ ಪರಿಣಾಮ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುತ್ತಿವೆ ಇನ್ನೂ ಅನೇಕ ಸಮಸ್ಯೆಗಳು ತಲೆದೋರಿವೆ.

Leave a Comment