ಆರ್.ಎಸ್.ಎಸ್. ಕೇಂದ್ರ ಸರ್ಕಾರದ ನೀತಿ ನಿರೂಪಕ : ರಾಹುಲ್ ಗಾಂಧಿ

ಕಲಬುರಗಿ,ಫೆ.13-ಕೇಂದ್ರದ ಬಿಜೆಪಿ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್.ಎಸ್.ಎಸ್) ಆಣತಿಯಂತೆ ಕೆಲಸ ನಿರ್ವಹಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿಲ್ಲಿ ಟೀಕಿಸಿದರು.

ಹೈದ್ರಾಬಾದ ಕರ್ನಾಟಕದಲ್ಲಿ ಕೈಗೊಂಡಿರುವ ಜನಾಶೀರ್ವಾದ ಯಾತ್ರೆಯ ಕೊನೆಯ ದಿನವಾದ ಇಂದು ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಯಮಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ನೀತಿ, ನಿಯಮಗಳನ್ನು ಆರ್.ಎಸ್.ಎಸ್.ನಿರೂಪಿಸುದಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ಇಲಾಖೆಗೆ ಆರ್.ಎಸ್.ಎಸ್.ಮಾರ್ಗದರ್ಶಕರಿದ್ದಾರೆ ಎಂದು ಹೇಳಿದರು.

“ಈ ಹಿಂದೆ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಯಾವುದೇ ಮಸೂದೆ ಪಾಸು ಮಾಡಬೇಕಿದ್ದರು. ಆಯಾ ಕ್ಷೇತ್ರದ ಪರಿಣಿತರೊಂದಿಗೆ ಅದರ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿ ನಂತರ ಮಸೂದೆ ಪಾಸು ಮಾಡುತ್ತಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಆರ್.ಎಸ್.ಎಸ್. ನೀಡಿದ ಸಲಹೆ, ಸೂಚನೆಯಂತೆ ಮಸೂದೆ ಜಾರಿ ಮಾಡುತ್ತಿದೆ” ಎಂದು ಆರೋಪಿಸಿದರು.

@12bc = ಜಿ.ಎಸ್.ಟಿ.ಸುಧಾರಣೆ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜಿ.ಎಸ್.ಟಿ.ಯನ್ನು ಸರಳಿಕೃತಗೊಳಿಸಿ ಅದರಲ್ಲಿ ಸಾಕಷ್ಟು ಸುಧಾರಣೆಗಳನ್ನು ಮಾಡಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು.

ಜಿ.ಎಸ್.ಟಿ. ಜಾರಿಗೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರು ಕೇಳಿದ ಪ್ರಶ್ನೆಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ ಅವರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದ ಜಿ.ಎಸ್.ಟಿ. ಜನರ ಜೀವನ ವನ್ನು ಸರಳಗೊಳಿಸಿದೆಯೇ, ಕ್ಲಿಷ್ಟಗೊಳಿಸಿದೆಯೇ ಎಂದು ಪ್ರಶ್ನಿಸಿದರು.

ಜಿ.ಎಸ್.ಟಿ.ಜಾರಿಗೆ ತರುವ ಮೊದಲು ಅದರ ಸಾಧಕ-ಬಾಧಕಗಳ ಬಗ್ಗೆ ಸರ್ಕಾರ ಚರ್ಚೆ ನಡೆಸಬೇಕಿತ್ತು. ಆದರೆ ತರಾತುರಿಯಲ್ಲಿ ರಾತ್ರೋರಾತ್ರಿ ಜಿ.ಎಸ್.ಟಿ. ಜಾರಿಗೆ ತಂದು ದೇಶದ ಜನರನ್ನು ಹೈರಾಣು ಮಾಡಲಾಗಿದೆ ಎಂದರು.

@12bc = ನೋಟ ರದ್ದತಿಯಿಂದ ಧನಿಕರಿಗೆ ಲಾಭ

ಬಿಜೆಪಿ ರಾತ್ರೋರಾತ್ರಿ ನೋಟು ರದ್ದತಿ ಮಾಡುವ ನಿರ್ಧಾರ ಕೈಗೊಳ್ಳುವುದರ ಮೂಲಕ ಸಾಮಾನ್ಯ ಜನರನ್ನು ಸಂಕಷ್ಟಕ್ಕೀಡು ಮಾಡಿ ಕಾಳ ಧನಿಕರು ತಮ್ಮಲ್ಲಿರುವ ಕಪ್ಪು ಹಣವನ್ನು ಬಿಳಿಯಾಗಿಸಿಕೊಳ್ಳಲು ಅನುವುಮಾಡಿಕೊಟ್ಟಿತು ಎಂದು ಆರೋಪಿಸಿದ ರಾಹುಲ್ ಗಾಂಧಿ ಅವರು, ನೋಟು ರದ್ದತಿ ನಿರ್ಧಾರ ಆರ್.ಬಿ.ಐ. ನಿರ್ಧಾರವಾಗಲಿ, ಹಣಕಾಸು ಸಚಿವ ಅರುಣ ಜೇಟ್ಲಿ ಅವರದ್ದಾಗಲಿ ಅಲ್ಲ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವ್ಯಕ್ತಿಯೊಬ್ಬರು ನೀಡಿದ ಸಲಹೆ ಮೇರೆಗೆ ಮಾಡಿದೆ ಎಂದರು.

ಬೇಳೆಕಾಳು ನೀತಿಗೆ ಸಂಬಂಧಿಸಿದಂತೆ ಸಂತೋಷ ಲಂಗರ್ ಎಂಬುವವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ ಅವರು, ರೈತರು ಸದೃಢರಾದರೆ ಮಾತ್ರ ದೇಶ ಸದೃಢವಾಗಲು ಸಾಧ್ಯವಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಜೆಟ್ ನಲ್ಲಿ ರೈತರಿಗಾಗಿ 17 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ. ಆದರೆ ಈ ಹಣವನ್ನು ಹೇಗೆ ಬಳಕೆ ಮಾಡುತ್ತೇವೆ ಮತ್ತು ರೈತರ ಅನುಕೂಲಕ್ಕೆ ಹೇಗೆ ಬಳಕೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿಲ್ಲ. ಕೃಷಿ ಆಧಾರಿತ ಉದ್ಯೋಗ ಸೃಷ್ಟಿಸಿಲ್ಲ, ಕೃಷಿ ಉತ್ಪಾದನೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಆದರೆ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ರೈತರ ಪರವಾದ ಸರ್ಕಾರವಾಗಿದ್ದು, ಚುನಾವಣಾ ಪೂರ್ವದಲ್ಲಿ ನೀಡಿದ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಸರ್ವಮಂಗಳಾ ಪಾಟೀಲ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತ ಬಂದಿದೆ. ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಇರಬೇಕು ಎಂಬುವುದು ತಮ್ಮ ಆಶಯವಾಗಿದೆ ಎಂದರು.

ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಕೆ.ಸಿ.ವೇಣುಗಾಪಾಲ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ ಖರ್ಗೆ, ಡಾ.ಜಿ.ಪರಮೇಶ್ವರ, ಡಾ.ಅಜಯಸಿಂಗ್ ವೇದಿಕೆ ಮೇಲಿದ್ದರು.

ಉದ್ಯಮಿಗಳು, ವಿದ್ಯಾರ್ಥಿಗಳು ಸಂವಾದಲ್ಲಿ ಪಾಲ್ಗೊಂಡಿದ್ದರು.

Leave a Comment