ಆರ್ ಶಂಕರ್ ಸಂಪುಟ ಸೇರ್ಪಡೆಗೆ ಕೋಳಿವಾಡ ವಿರೋಧ

ಬೆಂಗಳೂರು, ಜೂ 13-ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷೇತರ ಶಾಸಕ  ಆರ್ ಶಂಕರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವುದಕ್ಕೆ  ಮಾಜಿ ವಿಧಾನಸಭಾಧ್ಯಕ್ಷ  ಕೆ ಬಿ  ಕೋಳಿವಾಡ ವಿರೋಧ ವ್ಯಕ್ತಪಡಿಸಿದ್ದಾರೆ

ನಾಳೆ ಸಂಪುಟ ವಿಸ್ತರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಸಂಕಟ ತಂದೊಡ್ಡಿದೆ

ಶಂಕರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದರ ವಿರುದ್ಧ ಮಾಜಿ ಸ್ಪೀಕರ್ ಕೋಳಿವಾಡ ಇಂದು ಕಾಂಗ್ರೆಸ್ ನಾಯಕರಾದ ಉಪ ಮುಖ್ಯಮಂತ್ರಿ ಪರಮೇಶ್ವರ್, ಸಚಿವ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಶಂಕರ್ ಅವರನ್ನು ಸಂಪುಟಕ್ಕೆ ಸೇರಿಕೊಳ್ಳಲಾಗುತ್ತಿದೆ ಎಂಬುದೇ  ಕೋಳಿವಾಡ ಅವರ  ಕೋಪಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಈ ಹಿಂದೆಯೂ ಸಿದ್ದರಾಮಯ್ಯ ಅವರ ವಿರುದ್ಧ ಕೋಳಿವಾಡ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆರ್ ಶಂಕರ್ ಅವರು ವಿಧಾನಸಭಾ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಿಂದ ಕೆ ಬಿ ಕೋಳಿವಾಡ್ ಅವರನ್ನು ಸೋಲಿಸಿ ವಿಧಾನಸಭೆಗೆ ಚುನಾಯಿತರಾಗಿದ್ದರು.

Leave a Comment