ಆಷಾಢೋತ್ಸವ ಸಾಂಸ್ಕೃತಿಕ ಹಬ್ಬ: ಮೆರವಣಿಗೆ

ರಾಯಚೂರು.ಆ.01- ಭಾವಸಾರ ಕ್ಷತ್ರಿಯ ಸಮಾಜ ವತಿಯಿಂದ ಆಷಾಢೋತ್ಸವ ಸಾಂಸ್ಕೃತಿಕ ಹಬ್ಬ ನಿಮಿತ್ಯ ಇಂದು ಸ್ಥಳೀಯ ಗಾಂಧಿ ವೃತ್ತದ ಬಳಿ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ಭಾವಚಿತ್ರ ಮೆರವಣಿಗೆ ಅತಿ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ಭಾವಸಾರ ಕ್ಷತ್ರಿಯ ಸಮಾಜವೂ ಆಷಾಢ ಸಾಂಸ್ಕೃತಿಕ ಹಬ್ಬದ ಅಂಗವಾಗಿ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಗಾಂಧಿ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ನಗರದ ವಿವಿಧ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ, ಸ್ಥಳೀಯ ರುಕ್ಮಿಣಿ ಕಲ್ಯಾಣ ಮಂಟಪಕ್ಕೆ ತಲುಪಿತು.
ಭಾವಚಿತ್ರ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು. ದಿಂಡಿ ಉತ್ಸವ, ಗಡಿಗೆ ಹೊಡೆಯುವುದು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆದವು. ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ಶಾಸಕ ಡಾ.ಶಿವರಾಜ್ ಪಾಟೀಲ್, ಮಾಜಿ ಶಾಸಕ ಎ.ಪಾಪಾರೆಡ್ಡಿ, ನಗರಸಭೆ ಉಪಾಧ್ಯಕ್ಷ ಜಯಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಸಮಾಜದ ರಾಜ್ಯಾಧ್ಯಕ್ಷರಾದ ಸುಧೀರ್ ನವಲೆ, ಜಯವಂತರಾವ್ ಪತಂಗೆ, ಶ್ರೀನಿವಾಸ ರಾವ್ ಪತಂಗೆ ಸೇರಿದಂತೆ ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Comment