ಆಸ್ಟ್ರೇಲಿಯಾ ವಿರುದ್ಧ ಭಾರತದ ಟೆಸ್ಟ್ ತಂಡ

ಮುಂಬೈ, ಫೆ. ೧೪- ಈ ತಿಂಗಳ 23 ರಂದು ಆರಂಭವಾಗಲಿರುವ ಆಸ್ಟ್ರೇಲಿಯ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಬಾಂಗ್ಲಾದೇಶ್ ವಿರುದ್ಧ ಆಡಿದ 16 ಜನರ ತಂಡವನ್ನು ಎಂಎಸ್‌ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಮಂಡಲಿ ಉಳಿಸಿಕೊಂಡಿದೆ.

ಆಸ್ಟ್ರೇಲಿಯ ವಿರುದ್ಧ ನಡೆಯಲಿರುವ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತದ 16 ಮಂದಿಯ ತಂಡ ಕೆಳಕಂಡಂತಿದೆ.

ವಿರಾಟ್ ಕೊಹ್ಲಿ (ಕ್ಯಾಪ್ಟನ್), ಲೋಕೇಶ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಇಶಾಂತ್ ಶರ್ಮ, ಉಮೇಶ್ ಯಾದವ್, ಅಭಿನವ್ ಮುಕುಂದ್, ಭುವನೇಶ್ವರ ಕುಮಾರ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ ಮತ್ತು ಕುಲ್ದೀಪ್ ಯಾದವ್.

Leave a Comment