ಆ.12 ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ದಾವಣಗೆರೆ, ಆ. 10 – ಶ್ರೀ ಬೀರೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಆ. 12 ರಂದು ಬೆಳಗ್ಗೆ 11 ಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ನೂತನ ಸಚಿವರು ಹಾಗೂ ಶಾಸಕರುಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಸಂಘದ ಖಜಾಂಚಿ ಕೆಂಗೋ ಹನುಮಂತಪ್ಪ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಅಂದು ಬೆಳಗ್ಗೆ 10 ಕ್ಕೆ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶಾಲೆ ಮತ್ತು ವಸತಿ ನಿಲಯದ ಭೂಮಿ ಪೂಜೆ ಹಾಗೂ ಶಿಲಾನ್ಯಾಸಕ್ಕೆ ಚಾಲನೆ ನೀಡಲಾಗುವುದು. ನಂತರ 11 ಕ್ಕೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಮಾಜಿ ಶಾಸಕ ಕೆ.ಮಲ್ಲಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವರುಗಳಾದ ಪುಟ್ಟರಂಗಶೆಟ್ಟಿ, ಯು.ಟಿ.ಖಾದರ್, ಬಂಡೆಪ್ಪ ಕಾಶೆಂಪುರ್, ಆರ್.ಶಂಕರ್, ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ, ಎಸ್.ಎ.ರವೀಂದ್ರನಾಥ್ ಮತ್ತಿತರರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಬಿ.ಹೆಚ್.ಪರಶುರಾಮಪ್ಪ, ಜೆ.ಕೆ.ಕೊಟ್ರಬಸಪ್ಪ, ಬಿ.ಎಂ.ಸತೀಶ್, ಹೆಚ್.ಎನ್.ಗುರುನಾಥ್, ಕುಂದುವಾಡದ ಗಣೇಶ್, ಇಟ್ಟಿಗುಡಿ ಮಂಜುನಾ ಥ್ ಇದ್ದರು.

Leave a Comment