ಆ.20 ರಂದು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಧಾರವಾಡ, ಆ 6- ಬರುವ ನವ್ಹಂಬರ ತಿಂಗಳಲ್ಲಿ ಧಾರವಾಡದಲ್ಲಿ ನಡೆಯಲಿರುವ 84 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆ ಕುರಿತು 20 ಅಗಸ್ಟ್ 2018 ಸೋಮವಾರ ಮುಂಜಾನೆ 10-30 ಗಂಟೆಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ರಾಜ್ಯ ಕ.ಸಾ.ಪ. ಅಧ್ಯಕ್ಷರಾದ ಡಾ. ಮನು ಬಳಿಗಾರ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಜಿಲ್ಲೆಯ ಸಾಹಿತಿಗಳು, ಚಿಂತಕರು, ಕಲಾವಿದರು, ಕನ್ನಡ ಪರ ಸಂಘಟನೆಗಳ, ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ವಿವಿಧ ಸಂಘಟನೆಗಳ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ವಿಶ್ವವಿದ್ಯಾಲಯ ಶಿಕ್ಷಕರ ಮತ್ತು ನೌಕರರ ಸಂಘಗಳ ಪದಾಧಿಕಾರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಎನ್.ಎಸ್.ಎಸ್/ ಎನ್.ಸಿ.ಸಿ. ಕಾರ್ಯಕ್ರಮಾಧಿಕಾರಿಗಳು  ಮತ್ತು ಜಿಲ್ಲೆಯ ಸಂಸದರು, ಶಾಸಕರು, ಮಹಾಪೌರರು, ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು. ಪತ್ರಕರ್ತರು, ಸರಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು, ಕನ್ನಡ ಸಹೃದಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆ ಮಾರ್ಗದರ್ಶನ ನೀಡಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment