ಇಂದು ಕೇಂದ್ರ ತಂಡದಿಂದ ಮಳೆ ಹಾನಿ ಅಧ್ಯಯನ

ಮಂಗಳೂರು, ಸೆ.೧೨- ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತದಿಂದ ಉಂಟಾಗಿರುವ ಹಾನಿ ಕುರಿತು ಕೇಂದ್ರ ಸರ್ಕಾರದ ಮೂವರು ಹಿರಿಯ ಅಧಿಕಾರಿಗಳ ಇಂದು ಅಧ್ಯಯನ ನಡೆಸಲಿದೆ. ಮೊದಲ ಹಂತದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ಎರಡು ಪ್ರತ್ಯೇಕ ತಂಡಗಳು ರಾಜ್ಯದಲ್ಲಿ ಅಧ್ಯಯನ ನಡೆಸಲಿವೆ. ಎರಡೂ ತಂಡಗಳು ಇಂದು ಬೆಳಿಗ್ಗೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿವೆ. ಮೊದಲ ತಂಡ ಕೊಡಗು ಜಿಲ್ಲೆಗೆ ಭೇಟಿ ನೀಡಲಿದೆ. ಎರಡನೇ ತಂಡ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ.
ಕೇಂದ್ರ ಸರ್ಕಾರದ ಆರ್ಥಿಕ ಸಚಿವಾಲಯದ ವೆಚ್ಚ ವಿಭಾಗದ ಉಪ ಕಾರ್ಯದರ್ಶಿ ಭರತೇಂದು ಕುಮಾರ್ ಸಿಂಗ್, ಕಂದಾಯ ಇಲಾಖೆ ಉಪ ಕಾರ್ಯದರ್ಶಿ ಮಾಣಿಕ್ ಚಂದ್ರ ಪಂಡಿತ್ ಮತ್ತು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ಪ್ರಾದೇಶಿಕ ಅಧಿಕಾರಿ ಸದಾನಂದ ಬಾಬು ಅವರನ್ನೊಳಗೊಂಡ ತಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ವರದಿ ನೀಡಲಿದೆ.

Leave a Comment