ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಜೆಸಿಬಿ ಘರ್ಜನೆ

250 ಅನಧಿಕೃತ ಅಂಗಡಿ ಮಳಿಗೆಗಳ ತೆರವು ಕಾರ್ಯಾಚರಣೆ
ಮೈಸೂರು. ಸೆ.12: ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಜೆಸಿಬಿ ಘರ್ಜಿಸಿದೆ. ಕಂದಾಯ ಇಲಾಖೆ, ಗ್ರಾಮ ಠಾಣಾ ಮತ್ತು ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 250 ಅಂಗಡಿ ಮಳಿಗೆಗಳು ಅಧಿಕಾರಿಗಳು ಇಂದು ಬೆಳಿಗ್ಗೆ ತೆರವುಗೊಳಿಸಿದರು.
ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲಾಯಿತು. ಡಿಸಿಪಿ ಮುತ್ತುರಾಜ್ ಎಸಿಪಿ ಲೋಕೇಶ್ ನೇತೃತ್ವದಲ್ಲಿ 350ಕ್ಕೂ ಹೆಚ್ಚು ಪೊಲೀಸ್ಸಿಬ್ಬಂದಿಗಳ ಭದ್ರತೆಯಲ್ಲಿ 5 ಜೆಸಿಬಿಗಳೊಂದಿಗೆ ತೆರವು ಕಾರ್ಯಾಚರಣೆ ನಡೆಸಲಾಯಿತು.
ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಂಗಡಿ ಮಳಿಗೆಗಳನ್ನು ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಜಿಲ್ಲಾಧಿಕಾರಿ ಅಭಿರಾಮ್ಜಿ. ಶಂಕರ್ಮಳಿಗೆಗಳು ಮತ್ತು ಅಂಗಡಿಗಳ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದರು. ಆದರೆ, ಅವರು ಇದಕ್ಕೆ ಒಪ್ಪಿರಲಿಲ್ಲ ಎನ್ನಲಾಗಿದೆ. ಅಲ್ಲದೆ, ಅಂಗಡಿಗಳನ್ನು ಉಳಿಸಿಕೊಳ್ಳಲು ಪ್ರತಿಭಟನೆಯ ಮಾರ್ಗ ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ರಮೇಶ್ ಬಾಬು ನೇತೃತ್ವದಲ್ಲಿ ಮಳಿಗೆಗಳು ಮತ್ತು ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಚಾಮುಂಡಿಬೆಟ್ಟದ ದೇವಸ್ಥಾನದ ರಸ್ತೆಯನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Comment