ಇಬ್ಬರು ಕೊರಿಯಾ ಮಹಿಳೆಯರ ಬಂಧನ 8 ಕೋಟಿ ರೂ. ಚಿನ್ನ ಜಪ್ತಿ

ಚೆನ್ನೈ, ಜ. ೧೨- 8 ಕೋಟಿ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಕೊರಿಯಾ ಮಹಿಳಾ ಪ್ರಯಾಣಿಕರನ್ನು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಖಚಿತ ಮಾಹಿತಿಯಾಧಾರದ ಮೇಲೆ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಂಕಾಂಗ್‌ನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ನಡೆಸಿದ ವೇಳೆ 24 ಕೆಜಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡುತ್ತಿದುದು ಪತ್ತೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಇಬ್ಬರು ಮಹಿಳೆಯರು ತಲಾ 12 ಚಿನ್ನದ ಬಿಸ್ಕತ್‌ಗಳನ್ನು ಒಳ ಉಡುಪಿನಲ್ಲಿ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಪತ್ತೆಯಾಗಿದೆ. ಇಬ್ಬರು ಮಹಿಳಾ ಪ್ರಯಾಣಿಕರನ್ನು ಬಂಧಿಸಿ 8 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.

Leave a Comment