ಇವಿಎಮ್ ಬಳಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ನವದೆಹಲಿ, ಜೂ 13 -ಬ್ಯಾಲಟ್ ಪೇಪರ್ ಬಳಸಿ ಮತ್ತೊಮ್ಮೆ ಲೋಕಸಭಾ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಸಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಮನೋಹರ್ ಲಾಲ್ ಶರ್ಮಾ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಚುನಾವಣೆ ಆಯೋಗಕ್ಕೆ ಇವಿಎಮ್ ಮೂಲಕ ಚುನಾವಣೆ ನಡೆಸುವ ಅಧಿಕಾರ ಇಲ್ಲ ಎಂದು ವಾದಿಸಿದ್ದಾರೆ.
ಸತತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಗುರುತಿಸಿಕೊಂಡಿರುವ ಶರ್ಮಾ, ಜನರ ಹಕ್ಕುಗಳ ಪ್ರಾಧಿನಿಧ್ಯ ಕಾಯ್ದೆಯಡಿ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳಿಂದ ಚುನಾವಣೆ ನಡೆಸುವ ಹಕ್ಕು ಹೊಂದಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಚುನಾವಣಾ ಆಯೋಗಕ್ಕೆ ಇವಿಎಮ್ ಯಂತ್ರಗಳ ಮೂಲಕ ಚುನಾವಣೆ ನಡೆಸುವ ಹಕ್ಕು ನೀಡಲಾಗಿಲ್ಲ. ಕೇವಲ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಅಧಿಕಾರ ನೀಡಲಾಗಿದೆ ಎಂದು ಶರ್ಮಾ ವಾದಿಸಿದ್ದು, ರಜಾ ಕಾಲದ ಪೀಠದ ಎದುರು ಶುಕ್ರವಾರ ತ್ವರಿತ ವಿಚಾರಣೆ ನಡೆಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Leave a Comment