ಉಚಿತ ಬಸ್‍ಪಾಸ್ ಗೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪಾಂಡವಪುರ: ಜು:12- ತುಮಕೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ಮಾಡಿರುವ ಪೊಲೀಸರ ಕ್ರಮವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಐದು ದೀಪವೃತ್ತದಲ್ಲಿ ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನಂತರ ಮೆರವಣಿಗೆ ಮೂಲಕ ಪಟ್ಟಣದ ಮಿನಿವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಡಿ.ಹನುಮಂತರಾಯಪ್ಪಗೆ ಮನವಿ ನೀಡಿದರು.
ಸರಕಾರಗಳು ನೀಡುವುದಾದರೆ ಎಲ್ಲಾ ವಿದ್ಯಾರ್ಥಿಗಳಿಗೂ ಸಮಾನವಾಗಿ ಬಸ್‍ಪಾಸ್ ನೀಡಿ. ಅದನ್ನು ಬಿಟ್ಟು ಜಾತಿ ಆಧಾರದ ಮೇಲೆ ಬಸ್‍ಪಾಸ್ ನೀಡುವ ಮೂಲಕ ಸರಕಾರವೇ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಜಾತಿತಾರತಮ್ಯ ಮೂಡುವಂತೆ ಮಾಡುತ್ತಿದ್ದಾರೆ. ಕೇವಲ ಇದೊಂದೇ ಯೋಜನೆಯಲ್ಲ ಸರಕಾರ ನೀಡುವ ಎಲ್ಲಾ ಯೋಜನೆಯಲ್ಲೂ ಸಹ ಸಾಮಾಜ್ಯ ವರ್ಗದ ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿರುವುದು, ಮಕ್ಕಳ ಮನಸ್ಸಿನಲ್ಲಿ ಕೆಟ್ಟಭಾವನೆಯನ್ನು ಮೂಡಿಸುವಂತೆ ಮಾಡಿವೆ. ಆದ್ದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಕ್ರಮಕೈಗೊಳ್ಳಬೇಕು. ರಾಜ್ಯ ಸರಕಾರದ ತಾರತಮ್ಯ ನೀತಿಯ ಬಗ್ಗೆ ಅವರೇ ಕ್ರಮತೆಗೆದುಕೊಂಡು ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಸ್ತೆತಡೆ ಮಾಡಿ ಯಾವುದೇ ಬಸ್‍ಗಳು ಸಂಚಾರ ಮಾಡದಂತೆ ವಿದ್ಯಾರ್ಥಿಗಳು ಉಗ್ರವಾದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರವಹಿಸಿದರು.
ಬಸ್‍ಪಾಸ್ ತಾರತಮ್ಯದ ವಿರುದ್ದ ತುಮಕೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾರಿ ಪ್ರಹಾರ ನಡೆಸಿರುವುದು ಸರಿಯಲ್ಲಿ. ಈ ಬಗ್ಗೆ ಸರಕಾರ ಶಿಸ್ತು ಕ್ರಮತೆಗೆದುಕೊಳ್ಳಬೇಕು, ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಮುಖಂಡರಾದ ಪ್ರಜ್ವಲ್, ಶಶಾಂಕ್, ನಾರಾಯಣ, ಶೃತಿ, ಕಾವ್ಯ, ಹನುಮಂತು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Comment