ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ ವರದಿ : ಪ್ರಿಯಾಂಕಾ ವಾಗ್ದಾಳಿ

ಲಖನೌ, ಅ ೨೨ – ಕಳೆದ ೨೦೧೭ ರಲ್ಲಿ ಉತ್ತರ ಪ್ರದೇಶದಲ್ಲಿ ಹಿಳೆಯರ ಮೇಲಿನ ಅಪರಾಧ ಪ್ರಮಾಣ ಹೆಚ್ಚಳವಾಗಿದೆ ಎಂಬ ಎನ್‌ಸಿಆರ್‌ಬಿ ವರದಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಯ್ ಬರೇಲಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ “ಮಹಿಳೆಯರ ಮೇಲಿನ ಅಪರಾಧಗಳಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ, ಇದು ನಾಚಿಕೆಗೇಡಿನ ಸಂಗತಿ ಮತ್ತು ಮುಖ್ಯಮಂತ್ರಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದರು.
ಮುಂದಿನ ಮೂರು ದಿನಗಳ ಕಾಲ ಪಕ್ಷಕ್ಕೆ ಹೊಸದಾಗಿ ನೇಮಕಗೊಂಡ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ರಾಯ್ ರೇ ಬರೇಲಿಗೆ ತೆರಳಿದರು
ಇದಕ್ಕೂ ಮುನ್ನ ಟ್ವೀಟ್ ಮಾಡಿರುವ ಪ್ರಿಯಾಂಕಾ, ರಾಜ್ಯದಲ್ಲ‘ಬೇಟಿ ಬಚಾವೊ ಅಭಿಯಾನ್’ ಕ್ಕಾಗಿ ಮಾತನಾಡುವ ಜನರು ನಾಚಿಕೆಪಡಬೇಕಿದೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಿರುವ ರಾಜ್ಯ ಎಂಬ ಹಣೆಪಟ್ಟಿಯನ್ನು ರಾಜ್ಯ ಹೊತ್ತುಕೊಂಡಿದೆ. ಕೇವಲ ಒಂದು ವರ್ಷದಲ್ಲಿ ೫೬,೦೦೦ ಅಪರಾಧಗಳು ನಡೆದಿವೆ ಮತ್ತು ಇನ್ನೂ ಸಾವಿರ ಪ್ರಕರಣಗಳು ವರದಿಯಾಗಿಲ್ಲ” ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಪ್ರಿಯಾಂಕಾ ವಾದ್ರಾ, ಎನ್‌ಸಿಆರ್ ಬಿಯ ವರದಿಯನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

Leave a Comment