ಉದ್ಯಮಿ ಆತ್ಮಹತ್ಯೆ

ಮಂಗಳೂರು, ಎ.೧೫- ಉದ್ಯಮಿ ಹಾಗೂ ಹವ್ಯಾಸಿ ವ್ಯಂಗ್ಯ ಚಿತ್ರಕಾರ ನಿಖಿಲ್ ಎಂ. ಪೈ (೨೮) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ  ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವರು ಶನಿವಾರ ರಾತ್ರಿ ವಿಷ ಸೇವನೆ ಮಾಡಿದ್ದರು. ರವಿವಾರ ಮನೆಯವರು ಗಮನಿಸುವಾಗ ವಿಷ ಸೇವನೆ ಮಾಡಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಮೃತ ವ್ಯಕ್ತಿಯು ಹಣದ ಮುಗ್ಗಟ್ಟಿನಿಂದ ಸಂಕಷ್ಟದಲ್ಲಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment