ಉದ್ಯೋಗ ಖಾತ್ರಿ ಕೆಲಸ ನೀಡಲು ಮನವಿ

ಕಲಬುರಗಿ ಫೆ 20: ಗ್ರಾಮೀಣಪ್ರದೇಶದ  ಕೃಷಿ ಕೂಲಿಕಾರ್ಮಿಕರ ವಲಸೆ ತಪ್ಪಿಸಲು, ಅವರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನೀಡುವಂತೆ ಕಲ್ಯಾಣ ಕರ್ನಾಟಕ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಯಲ್ಲಪ್ಪ ದೊಡ್ಮನೆ ಅಲ್ದರ್ತಿ ಇಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ಬಂದು ಹಲವಾರು ವರ್ಷಗಳಾಗಿವೆ.ಆದರೂ ಗ್ರಾಮೀಣ ಕೂಲಿ ಕಾರ್ಮಿಕರು ನಗರಗಳಿಗೆ ಕೆಲಸ ಹುಡುಕಿಕೊಂಡು ಹೋಗುವದು ತಪ್ಪಿಲ್ಲ.ಆದ್ದರಿಂದ ಕಲಬುರಗಿಯ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯವರು ಯೋಜನೆಯಲ್ಲಿ ಪಾರದರ್ಶಕತೆ ತರಬೇಕು. ಜಾಬ್‍ಕಾರ್ಡುಗಳ ಸರಿಯಾದ ನಿರ್ವಹಣೆ ಮಾಡಬೇಕು ಎಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಕೃಷ್ಣ ರಾಕ್, ಸಂಜೀವಕುಮಾರ ಸಂಗನ ಸೇರಿದಂತೆ ಹಲವರು ಉಪಸ್ಥಿತರಿದ್ದರು..

Leave a Comment